Select Your Language

Notifications

webdunia
webdunia
webdunia
webdunia

ಸಂವಿಧಾನ ಉಳಿಸಿಕೊಳ್ಳುವ ಅಗತ್ಯವಿದೆ : ಸಿದ್ದರಾಮಯ್ಯ

ಸಂವಿಧಾನ ಉಳಿಸಿಕೊಳ್ಳುವ ಅಗತ್ಯವಿದೆ : ಸಿದ್ದರಾಮಯ್ಯ
ಬೆಂಗಳೂರು , ಭಾನುವಾರ, 13 ಆಗಸ್ಟ್ 2023 (12:18 IST)
ಬೆಂಗಳೂರು : ಎಷ್ಟೇ ಕಷ್ಟವಾದರೂ ಸಂವಿಧಾನವನ್ನು ಉಳಿಸಿಕೊಳ್ಳುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕ ರಾಜ್ಯ ವಕೀಲರ ಪರಿಷತ್ ಆಯೋಜಿಸಲಾಗಿದ್ದ 10ನೇ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದ್ದಾರೆ. ಸಂವಿಧಾನ ಉಳಿಸಿಕೊಳ್ಳುವ ನಿಟ್ಟಿನಲ್ಲಿ ವಕೀಲರ ಜವಾಬ್ದಾರಿ ಹೆಚ್ಚಿದೆ. ತಳವರ್ಗ, ಆರ್ಥಿಕವಾಗಿ ಶಕ್ತಿ ಇಲ್ಲದ ಜನರ ಬಗ್ಗೆ ಕನಿಕರದ ಬದಲಿಗೆ ಸಹಾಯ ಮಾಡುವ ಮನಸ್ಸು ಇರಬೇಕು.

ಸಮಾಜದಲ್ಲಿ ಇರುವ ಅಸಮಾನತೆ ತೊಡೆದುಹಾಕಲು ಪ್ರಯತ್ನ ಮಾಡಬೇಕು. ಅಂಬೇಡ್ಕರ್ ಅವರು ಮಾಡಿದ ಐತಿಹಾಸಿಕ ಭಾಷಣವನ್ನು ಎಲ್ಲರೂ ಓದಿದರೆ ಸಾಮಾಜಿಕ ಜವಾಬ್ದಾರಿ ಹೆಚ್ಚಾಗುತ್ತದೆ. ಸಮಾಜ ನನಗೇನು ಮಾಡಿದೆ ಎನ್ನುವುದಕ್ಕಿಂತ ನಾನು ಸಮಾಜಕ್ಕೆ ಏನು ಮಾಡಿದೆ ಎಂದು ಕೇಳಿಕೊಳ್ಳುವುದು ಮುಖ್ಯ. ಆ ದೃಷ್ಟಿಯಿಂದ ಚಿಂತನೆ ಮಾಡಬೇಕು ಎಂದಿದ್ದಾರೆ.  

Share this Story:

Follow Webdunia kannada

ಮುಂದಿನ ಸುದ್ದಿ

ತಮಿಳುನಾಡಿಗೆ ನೀರು ಬಿಡಲು ಕಾವೇರಿ ಪ್ರಾಧಿಕಾರ ಸೂಚನೆ