Select Your Language

Notifications

webdunia
webdunia
webdunia
Saturday, 12 April 2025
webdunia

ಮಾದರಿಯಾದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ಮಾಣ

ಸರ್ಕಾರ
ಬೆಂಗಳೂರು , ಗುರುವಾರ, 27 ಜನವರಿ 2022 (07:46 IST)
ಬೆಂಗಳೂರು :  ರಾಜ್ಯದಲ್ಲಿನ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ದೇಶದಲ್ಲೇ ಮಾದರಿಯಾದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನಾಗಿಸುವ ಯೊಜನೆಯನ್ನು ಸರ್ಕಾರ ಅನುಷ್ಠಾನಗೊಳಿಸಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.
 
ಚಿಕ್ಕಬಳ್ಳಾಪುರ ನಗರದ ಪೆರೇಸಂದ್ರ ಗ್ರಾಮದಲ್ಲಿ ಬುಧವಾರ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಕಾಮಗಾರಿಗೆ ಅವರು ಶಿಲಾನ್ಯಾಸ ಮಾಡುವ ಮೂಲಕ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

25 ಸಾವಿರ ಚದರ ಅಡಿಯಲ್ಲಿ ತಲಾ ಸುಮಾರು 9 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ದಿನದ 24 ಗಂಟೆಯು ಗುಣಮಟ್ಟದ ಆರೋಗ್ಯ ಸೌಲಭ್ಯ ದೊರಕಲಿದ್ದು, ಈಗಿರುವ 6 ಹಾಸಿಗೆಗಳ ಬದಲಾಗಿ 12 ಹಾಸಿಗೆಗಳ ವ್ಯವಸ್ಥೆ ಇರಲಿದೆ. ಒಬ್ಬ ವೈದ್ಯರ ಬದಲಾಗಗಿ ಮೂವರು ವೈದ್ಯರು ಇರುತ್ತಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೊಜ್ಜು ಬಂದಿದೆ ಎಂದು ಆ ಬಾಲಕಿ ಏನು ಮಾಡುದ್ಲು ಗೊತ್ತ?!