Select Your Language

Notifications

webdunia
webdunia
webdunia
webdunia

ದಲಿತ ಅಂಗವಿಕಲನ ಸೈಟ್‌ನಲ್ಲಿ ಸಿದ್ದರಾಮಯ್ಯ ಮನೆ: ಎಚ್‌ಡಿಕೆ ಹೊಸ ಬಾಂಬ್‌

Union Minister Kumaraswamy

Sampriya

ಬೆಂಗಳೂರು , ಶನಿವಾರ, 14 ಸೆಪ್ಟಂಬರ್ 2024 (14:43 IST)
ಬೆಂಗಳೂರು: ಮುಡಾ ನಿವೇಶನದ ಸದ್ದು ಜೋರಾಗುತ್ತಿರುವ ಬೆನ್ನಲ್ಲೇ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ.

ಮೈಸೂರಿನಲ್ಲಿ ದಲಿತ ಅಂಗವಿಕಲನಿಗೆ ಹಂಚಿಕೆಯಾಗಿದ್ದ ನಿವೇಶನವನ್ನು ಸಿದ್ದರಾಮಯ್ಯ ಅಕ್ರಮವಾಗಿ ಒತ್ತುವರಿ ಮಾಡಿಕೊಂಡು, ಅ ಜಾಗದಲ್ಲಿ ಮನೆ ಕಟ್ಟಿದ್ದಾರೆ. ಅವರು ಉಪ ಮುಖ್ಯಮಂತ್ರಿಯಾಗಿದ್ದಾಗ ಈ ಬೆಳವಣಿಗೆ ನಡೆದಿದೆ ಎಂದು ಎಚ್‌ಡಿಕೆ ನೇರ ಆರೋಪ ಮಾಡಿದ್ದಾರೆ.

ಸಿದ್ದರಾಮಯ್ಯ ಡಿಸಿಎಂ ಆಗಿ ಮೈಸೂರಿನಲ್ಲಿ ಮನೆ ಕಟ್ಟಿದ್ದರು. ಯಾರ ಜಾಗದಲ್ಲಿ ಸಿದ್ದರಾಮಯ್ಯ ಅವರೇ ಮನೆ ಕಟ್ಟಿದ್ದೀರಿ? ಬೇಕಾ ದಾಖಲೆ ಎಂದು ಪ್ರಶ್ನಿಸಿದರು.  

ದಲಿತನಿಗೆ ಹಂಚಿಕೆಯಾದ ಮುಡಾ ಸೈಟ್‌ನಲ್ಲಿ ಅಕ್ರಮವಾಗಿ ಸಿದ್ದರಾಮಯ್ಯ ಮನೆ ಕಟ್ಟಿದ್ದಾರೆ. ಮುಡಾ ಕೇಸ್‌ ಮಾತ್ರ ಅಲ್ಲ. ಸೀರಿಸ್ ಆಫ್ ಕೇಸ್ ಮೈಸೂರಿನಲ್ಲಿ ‌ಸಿದ್ದರಾಮಯ್ಯರದ್ದು ಇದೆ ಅಂತ ಆರೋಪ ಮಾಡಿದರು.

ದಲಿತನ ಜಾಗದಲ್ಲಿ ಮನೆ ಕಟ್ಟಿರೋ ಬಗ್ಗೆ ಸಿದ್ದರಾಮಯ್ಯ ಅವರಿಗೆ ಮಾತಾಡೋಕೆ ಹೇಳಿ. ದಲಿತನ ಜಾಗ ಒತ್ತುವರಿ ಮಾಡಿಕೊಂಡು ಮನೆ ಕಟ್ಟಿರೋ ಬಗ್ಗೆ ಸಿಎಂ ಅವರನ್ನು ಪ್ರಶ್ನಿಸಿ ಎಂದರು.



Share this Story:

Follow Webdunia kannada

ಮುಂದಿನ ಸುದ್ದಿ

ಎಫ್ಐಆರ್ ದಾಖಲಾಗುತ್ತಿದ್ದಂತೇ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡ ಶಾಸಕ ಮುನಿರತ್ನ