ಡಿವೈಎಸ್‌ಪಿ ಅನುಪಮಾ ಶೆಣೈ ಅವರು ತಮ್ಮ ರಾಜೀನಾಮೆಯನ್ನು ಹಿಂಪಡೆಯಬೇಕು. ಮತ್ತೆ ಭ್ರಷ್ಟರ ವಿರುದ್ಧ ಹೋರಾಟ ನಡೆಸಬೇಕು. ನಿಮ್ಮ ಬೆಂಬಲಕ್ಕೆ ನಾವಿದ್ದೇವೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಕೂಡ್ಲಿಗಿ ಡಿವೈಎಸ್‌ಪಿ ಅನುಪಮಾ ಶೆಣೈ ಅವರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ರಾಜ್ಯ ಸರಕಾರಕ್ಕೆ ತಕ್ಕ ಪಾಠ ಕಲಿಸುತ್ತಾರೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಈ ಹಿಂದೆ ಸಚಿವ ಪರಮೇಶ್ವರ್ ನಾಯ್ಕ್ ಅವರ ದಬ್ಬಾಳಿಕೆಯಿಂದ ಅನುಪಮಾ ಶೆಣೈ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಆದರೆ, ಇದೀಗ ಸಚಿವರು ಮಾನಸಿಕ ಕಿರುಕುಳ ನೀಡಿ ಕೂಡ್ಲಿಗಿ ಡಿವೈಎಸ್‌ಪಿ ಅನುಪಮಾ ಶೆಣೈ ಅವರನ್ನು ರಾಜೀನಾಮೆ ನೀಡುವಂತೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಕೂಡ್ಲಿಗಿ ಡಿವೈಎಸ್‌ಪಿ ಅನುಪಮಾ ಶೆಣೈ ಅವರು ರಾಜೀನಾಮೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ಅವರ ರಾಜೀನಾಮೆಗೆ ರಾಜ್ಯ ಸರಕಾರವೇ ನೇರ ಹೊಣೆ. ಮುಂದಿನ ದಿನಗಳಲ್ಲಿ ಸಾರ್ವಜನಿಕರು ರಾಜ್ಯ ಸರಕಾರಕ್ಕೆ ತಕ್ಕ ಪಾಠ ಕಲಿಸುತ್ತಾರೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಗುಡುಗಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.