Webdunia - Bharat's app for daily news and videos

Install App

ವಾಯುಭಾರ ಕುಸಿತದ ಮುಂದುವರೆದ ಎಫೆಕ್ಟ್: ಇಂದು ಮತ್ತು ನಾಳೆ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Webdunia
ಶನಿವಾರ, 16 ಅಕ್ಟೋಬರ್ 2021 (21:17 IST)
ಬೆಂಗಳೂರು: ಕರ್ನಾಟಕ ರಾಜ್ಯ  ಮಳೆ ನರ್ತನವಾಡುತ್ತಿದ್ದು ಅಲರ್ಟ್​ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಇಂದು ಮತ್ತು ನಾಳೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 
 
ಅರಬ್ಬಿ ಸಮುದ್ರದ ಲಕ್ಷದ್ವೀಪ ಭಾಗದಲ್ಲಿ ಹಾಗೂ ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಕರ್ನಾಟಕದಲ್ಲಿ ಅಕ್ಟೋಬರ್ 17 ರವರೆಗೂ ಮಳೆ ಮುಂದುವರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. 
 
ರಾಜ್ಯದ ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರುನಗರ, ಹಾವೇರಿ, ಧಾರವಾಡ, ಬೆಳಗಾವಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಗದಗ ಸೇರಿ ಒಟ್ಟು 16 ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
 
ಹೆಚ್.ಎಸ್.ಆರ್ ಲೇಔಟ್ ಜಲಾವೃತ: 
 
ವಾಯುಭಾರ ಕುಸಿತದ ಎಫೆಕ್ಟ್​ನಿಂದ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು, ನಿನ್ನೆ ಸಂಜೆ ಕೂಡ ರಾಜಧಾನಿಯಲ್ಲಿ  ಧಾರಾಕಾರ ಮಳೆ ಸುರಿದಿತ್ತು. ವರುಣನ ಆರ್ಭಟಕ್ಕೆ ನಗರದ ಪ್ರತಿಷ್ಠಿತ ಹೆಚ್.ಎಸ್.ಆರ್ ಲೇಔಟ್  ತತ್ತರಿಸಿದೆ. ಚರಂಡಿಗಳು ತುಂಬಿ ಮನೆಗಳಿಗೆ ಮಳೆ ನೀರು ನುಗ್ಗಿದೆ ಎಂದು ವರದಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೀತಿಸಿ, ಕೈ ಹಿಡಿದ ಪತ್ನಿಯನ್ನೇ ಮನಸೋ ಇಚ್ಛೇ ಚಾಕುವಿನಿಂದ ಇರಿದು ಹತ್ಯೆಗೈದ ಪತಿ

Kamal Hassan, ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದ ಕಮಲ್ ಹಾಸನ್‌ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯ್ಯಾಕ್ಷನ್ ಹೀಗಿತ್ತು

ಕಾಂಗ್ರೆಸ್ ಪಕ್ಷಕ್ಕೆ ಕಸದಲ್ಲಿ ರಸ ಮಾಡಲು ಯೋಜನೆ: ಆರ್. ಅಶೋಕ್ ಆರೋಪ

72 ವರ್ಷದ ವೃದ್ಧೆಗೆ ಮದುವೆಯ ಆಸೆ ತೋರಿಸಿ ಬರೋಬ್ಬರಿ ₹57 ಲಕ್ಷ ಪಂಗನಾಮ ಹಾಕಿದ ಭೂಪ

ಯೋಧರ ಕ್ಯಾಂಟೀನ್ ಗೆ ಅಬಕಾರಿ ಸುಂಕ ಇಲ್ಲ: ಸಿ.ಎಂ ಮಹತ್ವದ ಘೋಷಣೆ

ಮುಂದಿನ ಸುದ್ದಿ
Show comments