Select Your Language

Notifications

webdunia
webdunia
webdunia
webdunia

ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ: ಸಿಐಡಿ ಅಧಿಕಾರಿಗಳಿಂದ ಐವರು ಆರೋಪಿಗಳ ವಿಚಾರಣೆ

Contractor Sachin Panchal Suicide Case, Sachin Panchal Case, Minister Priyank Kharge

Sampriya

ಬೀದರ್ , ಶುಕ್ರವಾರ, 10 ಜನವರಿ 2025 (18:27 IST)
Photo Courtesy X
ಬೀದರ್: ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡಿದ ಯುವ ಗುತ್ತಿಗೆದಾರ ಸಚಿನ್‌ ಪಾಂಚಾಳ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಐವರು ಆರೋಪಿಗಳು ನಗರದಲ್ಲಿ ಶುಕ್ರವಾರ ಸಿಐಡಿ ವಿಚಾರಣೆಗೆ ಹಾಜರಾದರು.

ನಗರದ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ತಾತ್ಕಾಲಿಕವಾಗಿ ತೆಗೆದಿರುವ ಸಿಐಡಿ ಕಚೇರಿಯಲ್ಲಿ  ಡಿಐಜಿಪಿ ಶಾಂತನು ಸಿನ್ಹಾ, ಡಿವೈಎಸ್ಪಿ ಸುಲೇಮಾನ್‌ ತಹಶೀಲ್ದಾರ್‌ ಅವರ ಎದುರು ಆರೋಪಿಗಳು ಹಾಜರಾಗಿ ವಿಚಾರಣೆಗೆ ಒಳಗಾದರು.

ಪ್ರಕರಣದ ಆರೋಪಿಗಳಾದ ರಾಜು ಕಪನೂರ, ಗೋರಖನಾಥ, ನಂದಕುಮಾರ ನಾಗಭುಜಂಗಿ, ರಾಮನಗೌಡ ಪಾಟೀಲ ಹಾಗೂ ಸತೀಶ ವಿಚಾರಣೆಗೆ ಹಾಜರಾದರು. ಈಗಾಗಲೇ ಸಚಿನ್‌ ಕುಟುಂಬ ಸದಸ್ಯರನ್ನು ವಿಚಾರಣೆಗೆ ಒಳಪಡಿಸಿದ ಸಿಐಡಿ ಅಧಿಕಾರಿಗಳು ಅವರ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ಕೊಲೆ ಬೆದರಿಕೆ ಇದೆ ಎಂದು ಆರೋಪಿಸಿ ಸಚಿನ್‌ ಪಾಂಚಾಳ್‌ ಡಿ. 26ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್‌ನೋಟ್‌ನಲ್ಲಿ ರಾಜು ಕಪನೂರ ಸೇರಿದಂತೆ ಎಂಟು ಜನರ ಹೆಸರು ಉಲ್ಲೇಖಿಸಿದ್ದರು. ಸಚಿನ್‌ ಕುಟುಂಬದವರು ನೀಡಿದ ದೂರಿನ ಮೇರೆಗೆ ಒಂಬತ್ತು ಜನರ ವಿರುದ್ಧ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.




Share this Story:

Follow Webdunia kannada

ಮುಂದಿನ ಸುದ್ದಿ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ