Select Your Language

Notifications

webdunia
webdunia
webdunia
webdunia

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಸಚಿವ ಪ್ರಿಯಾಂಕ್‌ ಖರ್ಗೆ ಬಂಧನಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

Minister Priyank Kharge

Sampriya

ಬೆಂಗಳೂರು , ಶನಿವಾರ, 28 ಡಿಸೆಂಬರ್ 2024 (18:11 IST)
Photo Courtesy X
ಬೆಂಗಳೂರು: ಮೃತ ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆ ಪ್ರಕರಣ ಸಂಬಂಧ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು.

ಮೃತ ಗುತ್ತಿಗೆದಾರ ಸಚಿನ್‌ ಅವರು ಏಳು ಪುಟಗಳ ಮರಣಪತ್ರ ಬರೆದಿದ್ದಾರೆ. ಸಾಮಾಜಿಕ ಜಾಲತಾಣದಲ್ಲೂ ಹಾಕಿದ್ದಾರೆ. ಅವರನ್ನು ಸುಪಾರಿ ಕೊಟ್ಟು ಕೊಲ್ಲಿಸುವ ವಿಚಾರವೂ ಪ್ರಸ್ತಾವವಾಗಿದೆ. ಅವರಲ್ಲಿ ಪ್ರಿಯಾಂಕ್‌ ಖರ್ಗೆ ಆಪ್ತರ ಹೆಸರುಗಳೂ ಇವೆ. ತನಿಖೆ ಸರಿಯಾಗಿ ನಡೆಯಲು ಅವರ ರಾಜೀನಾಮೆ ಅಗತ್ಯ ಎಂದು ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ಪ್ರಿಯಾಂಕ್‌ ಖರ್ಗೆ ತಮಗೆ ಬೇಕಾದವರನ್ನು ಮುಂದಿಟ್ಟುಕೊಂಡು ವ್ಯವಹಾರ ಮಾಡುತ್ತಿದ್ದಾರೆ. ರಿಪಬ್ಲಿಕ್‌ ಆಫ್‌ ಕಲಬುರಗಿ ಆಗಿದೆ. ಕರ್ನಾಟಕದ ವ್ಯವಸ್ಥೆಯೇ ಬೇರೆ, ಅಲ್ಲಿನ ವ್ಯವಸ್ಥೆಯೇ ಬೇರೆ ಇದೆ. ಪೊಲೀಸರೂ ಖರ್ಗೆ ಹೇಳಿದಂತೆ ನಡೆದುಕೊಳ್ಳುತ್ತಿದ್ದಾರೆ. ದಲಿತ ಸಮುದಾಯಗಳು ಅವರ ವಿರುದ್ಧ ಮಾತನಾಡಿದರೆ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ದೂರಿದರು.

ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಕಲಬುರಗಿ ಗುತ್ತಿಗೆದಾರ ಸಚಿನ್‌ ಕುಟುಂಬದ ಜತೆ ಬಿಜೆಪಿ ನಿಲ್ಲಲಿದೆ. ಸಚಿವರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಈ ಕುರಿತು ಬಿಜೆಪಿ ಹೊರಾಟ ರೂಪಿಸಲಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್‌ ತಿಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಡಿಕೆ ಸುರೇಶ್‌ ಹೆಸರಿನಲ್ಲಿ ವಂಚನೆ: ಆರೋಪಿ ಐಶ್ವರ್ಯ ಗೌಡ, ಪತಿ ಅರೆಸ್ಟ್‌, ನಟ ಧರ್ಮಗೂ ಸಂಕಷ್ಟ