Select Your Language

Notifications

webdunia
webdunia
webdunia
webdunia

ಸಚಿವ ಕೆಎಸ್ ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಆತ್ಮಹತ್ಯೆ!

ಸಚಿವ ಕೆಎಸ್ ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಆತ್ಮಹತ್ಯೆ!
bangalore , ಮಂಗಳವಾರ, 12 ಏಪ್ರಿಲ್ 2022 (14:05 IST)
ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್‌ ಈಶ್ವರಪ್ಪ ವಿರುದ್ಧ ಕಮೀಷನ್‌ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಉಡುಪಿಯ ಖಾಸಗಿ ಲಾಡ್ಜ್‌ನಲ್ಲಿ ಡೆತ್ ನೋಟ್‌ ಬರೆದಿಟ್ಟು ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದೆ ಎನ್ನಲಾದ ಸಂತೋಷ್‌ ಪಾಟೀಲ್‌ ಶವ ಹೋಟೆಲ್‌ ಕೊಠಡಿ ಸಂಖ್ಯೆ ೨೦೭ರಲ್ಲಿ ಇದೆ. ಲಾಡ್ಜ್ ನಲ್ಲಿ ಇಬ್ಬರ ಜೊತೆ ತಂಗಿದ್ದರು.
ಡೆತ್ ನೋಟ್‌ನಲ್ಲಿ ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್‌ ಈಶ್ವರಪ್ಪ ನೇರ ಕಾರಣ. ಅವರಿಗೆ ಶಿಕ್ಷೆ ಆಗಬೇಕು. ಲಿಂಗಾಯತ ನಾಯಕರಾದ ಬಿಎಸ್‌ ಯಡಿಯೂರಪ್ಪ, ಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿಗಳು ನನ್ನ ಹೆಂಡತಿ ಮತ್ತು ಮಕ್ಕಳಿಗೆ ನೆರವು ನೀಡಿದ್ದಾರೆ ಎಂದು ಡೆತ್ ನೋಟ್‌ನಲ್ಲಿ ಮನವಿ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಧರ್ಮಯುದ್ಧ ಇಲ್ಲ: ಸಿಎಂ ಬೊಮ್ಮಾಯಿ