Select Your Language

Notifications

webdunia
webdunia
webdunia
webdunia

ಸರ್ಕಾರಕ್ಕೆ ಗುತ್ತಿಗೆದಾರರ ಸಂಘ ಎಚ್ಚರಿಕೆ

ಸರ್ಕಾರಕ್ಕೆ ಗುತ್ತಿಗೆದಾರರ ಸಂಘ ಎಚ್ಚರಿಕೆ
ಬೆಂಗಳೂರು , ಗುರುವಾರ, 6 ಜುಲೈ 2023 (13:37 IST)
ಬೆಂಗಳೂರು : ಈ ಹಿಂದೆ ಬೊಮ್ಮಾಯಿ ಸರ್ಕಾರದ ವಿರುದ್ಧ ಕಮೀಷನ್ ಬಾಂಬ್ ಹಾಕಿದ್ದ ಗುತ್ತಿಗೆದಾರರ ಸಂಘ ಇದೀಗ ಸಿದ್ದರಾಮಯ್ಯ ಸರ್ಕಾರದ ವಿರುದ್ಧವೂ ತಿರುಗಿಬೀಳುವ ಮುನ್ಸೂಚನೆ ನೀಡಿದೆ.

ಜುಲೈ 15ರೊಳಗೆ ಬಾಕಿ ಹಣ ಬಿಡುಗಡೆ ಮಾಡದಿದ್ದರೆ ಬೀದಿಗಿಳಿಯುವುದಾಗಿ ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಕಾಮಗಾರಿಗಳ ಬಿಲ್ ತಡೆಹಿಡಿಯಲಾಗಿತ್ತು. 

ಕಳೆದ ವಾರ ರಾಜ್ಯ ಗುತ್ತಿಗೆದಾರರ ಸಂಘ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಬಾಕಿ ಬಿಡುಗಡೆಗೆ ಒತ್ತಾಯಿಸಿತ್ತು. ಸಂಘದ ಮನವಿಯನ್ನು ಪುರಸ್ಕರಿಸಿದ ಸರ್ಕಾರ ಪೆಂಡಿಂಗ್ ಬಿಲ್ಗಳ ಬಿಡುಗಡೆಗೆ ಜೂನ್ 28 ರಂದು ಸುತ್ತೋಲೆ ಕೂಡ ಹೊರಡಿಸಿತ್ತು. ಆದರೆ ಈ ಆದೇಶ ಹೊರಡಿಸಿ ಒಂದು ವಾರ ಕಳೆದರೂ ಹಣ ಮಾತ್ರ ಬಿಡುಗಡೆ ಮಾಡಿಲ್ಲ.

ಸರ್ಕಾರದ ಆದೇಶ ಬರೀ ಸುತ್ತೋಲೆಗಷ್ಟೇ ಸೀಮಿತವಾಗಿದೆ. ಮೊದಲೇ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಗುತ್ತಿಗೆದಾರರು ಸರ್ಕಾರದ ನಡೆಯಿಂದ ಕಂಗಾಲಾಗಿದ್ದಾರೆ. ಜುಲೈ 15ರೊಳಗೆ ಹಣ ರಿಲೀಸ್ ಮಾಡದಿದಿದ್ದರೆ ಪ್ರತಿಭಟನೆಯ ಹಾದಿ ಹಿಡಿಯುವ ಎಚ್ಚರಿಕೆ ನೀಡಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಅನ್ಸಾರಿ ಹತ್ಯೆ ಕೇಸ್ : 10 ಅಪರಾಧಿಗಳಿಗೆ 10 ವರ್ಷ ಶಿಕ್ಷೆ