Publish Date: Mon, 13 Dec 2021 (14:53 IST)
Updated Date: Mon, 13 Dec 2021 (16:43 IST)
ರಾಜ್ಯದ ವಿವಿಧ ಇಲಾಖೆಗಳಲ್ಲಿ ನಡೆಯುತ್ತಿರುವ ವ್ಯಾಪಕ ಭ್ರಷ್ಟಾಚಾರದ ತನಿಖೆಯನ್ನು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅವರಿಂದ ತನಿಖೆ ನಡೆಸುವಂತೆ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಆಗ್ರಹಿಸಿದೆ.
'ನಾವು ಸಹ ತಪ್ಪು ಮಾಡಿದ್ದೇವೆ.ಸರಿ ಮಾಡಿ ಎನ್ನುವ ಕಾರಣಕ್ಕೆ ಹೋರಾಟ ಮಾಡುತ್ತಿದ್ದೇವೆ. ಭ್ರಷ್ಟಾಚಾರ ನಿಯಂತ್ರಿಸುವಂತೆ ಆಗ್ರಹಿಸಿ ಜನವರಿ ತಿಂಗಳಲ್ಲಿ ಬೆಂಗಳೂರಿನಲ್ಲಿ ಸುಮಾರು 1 ಲಕ್ಷ ಗುತ್ತಿಗೆದಾರರು ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ನಿರ್ದಿಷ್ಟವಾಗಿ ಯಾವುದೇ ಸಚಿವರು, ಶಾಸಕರು, ಅಧಿಕಾರಿಗಳ ಹೆಸರು ಬಹಿರಂಗಪಡಿಸಲು ನಿರಾಕರಿಸಿದ ಅವರು, ತನಿಖೆ ನಡೆಸುವುದಾದರೆ ಎಲ್ಲ ಸಾಕ್ಷ್ಯಾಧಾರಗಳನ್ನು ನೀಡುವುದಾಗಿ ತಿಳಿಸಿದರು.