Publish Date: Thu, 04 Jul 2019 (09:57 IST)
Updated Date: Thu, 04 Jul 2019 (09:59 IST)
ಕಲಬುರಗಿ : ಪ್ರಧಾನಿ ಮೋದಿ ಹೆಸರು ಹೇಳಿದರೆ ಬಿಜೆಪಿ ನಾಯಕರ ಬಾಯಿಗೆ ಬೂಟು ಹಾಕ್ತಿವಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಹಿಂದುತ್ವ ನೋಡಿ ಈ ಬಾರಿ ನಿಮಗೆ ವೋಟ್ ಹಾಕಿದ್ದೇವೆ. ಐದು ವರ್ಷ ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ. ಮುಂದಿನ ಸಲ ಚುನಾವಣೆಯಲ್ಲಿ ಮೋದಿ ಹೆಸರು ಹೇಳಿದರೆ ಬಾಯಲ್ಲಿ ಬೂಟು ಹಾಕ್ತೀವಿ ಎಂದು ಪ್ರಮೋದ್ ಮುತಾಲಿಕ್ ಬಿಜೆಪಿ ಸಂಸದರ ವಿರುದ್ಧ ಕಿಡಿಕಾರಿದ್ದಾರೆ.
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ಜುಲೈ 1ರಂದು ನಡೆದ ವಿರಾಟ್ ಹಿಂದೂ ಮಹಾಸಮಾವೇಶ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅವರು ಈ ರೀತಿ ಹೇಳಿಕೆ ನೀಡಿದ್ದು, ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.