ಬೆಂಗಳೂರು : ಮತಾಂತರ ನಿಷೇಧ ಕಾಯ್ದೆ ಜಾರಿಯಾದ ಬಳಿಕ ರಾಜ್ಯದಲ್ಲಿ ಮೊದಲ ಪ್ರಕರಣ ದಾಖಲಾಗಿದೆ.
ಪ್ರೀತಿ ಮಾಡಿದ ಮೇಲೆ ಮದುವೆಯಾಗಬೇಕಾದ್ರೆ ಮತಾಂತರ ಆಗಲೇಬೇಕೆಂದು ಯುವತಿಯನ್ನ ಬಲವಂತವಾಗಿ ಮತಾಂತರ ಮಾಡಿದ್ದವನ ವಿರುದ್ಧ ರಾಜಧಾನಿಯಲ್ಲಿ ಮೊದಲ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ಯಶವಂತಪುರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸೈಯದ್ ಮೊಯಿನ್ (24) ಮತಾಂತರ ನಿಷೇಧ ಕಾಯ್ದೆಯಲ್ಲಿ ಬಂಧಿತನಾದ ಮೊದಲ ಆರೋಪಿ.
ಪೊಲೀಸರಿಗೆ ಮೊದಲಿಗೆ ಇದೊಂದು ಮಿಸ್ಸಿಂಗ್ ಕೇಸ್ ಆಗಿತ್ತು, ತನಿಖೆ ವೇಳೆ ಮತಾಂತರ ಪ್ರಕರಣ ಎಂಬುದು ಬೆಳಕಿಗೆ ಬಂದಿದೆ.