Select Your Language

Notifications

webdunia
webdunia
webdunia
webdunia

ಚರಂಡಿ ನೀರನ್ನು ಶುದ್ಧ ಕುಡಿಯುವ ನೀರಾಗಿಸುವ ಯಂತ್ರದ ಪರಿವರ್ತನೆ

ಚರಂಡಿ ನೀರನ್ನು ಶುದ್ಧ ಕುಡಿಯುವ ನೀರಾಗಿಸುವ ಯಂತ್ರದ ಪರಿವರ್ತನೆ
bangalore , ಗುರುವಾರ, 11 ಆಗಸ್ಟ್ 2022 (19:00 IST)
ಚರಂಡಿ ನೀರನ್ನು ಕ್ಷಣಾರ್ಧದಲ್ಲಿ ಸಂಸ್ಕರಿಸಿ ಶುದ್ಧ ಕುಡಿಯುವ ನೀರು ನೀಡುವ ‘ಗಾಲ್ ಮೊಬೈಲ್’ ನೀರು ಸಂಸ್ಕರಣೆ ಯಂತ್ರದ ಪ್ರಾತ್ಯಕ್ಷಿಕೆಯನ್ನು ಬೊಮ್ಮನಹಳ್ಳಿಯಲ್ಲಿ ನಡೆಸಲಾಗಿದೆ. ರಾಜ್ಯದಲ್ಲಿ ಮೊದಲ ಬಾರಿಗೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಈ ಯಂತ್ರದ ಪ್ರಾತ್ಯಕ್ಷಿಕೆ ನೀಡಲಾಗುತ್ತಿದೆ. ಕೊಳವೆಯ ಮೂಲಕ ಚರಂಡಿ ನೀರನ್ನು ಹೀರಿಕೊಳ್ಳುವ ಯಂತ್ರವು, ನಾಲ್ಕು ಹಂತದ ಸಂಸ್ಕರಣೆಯಲ್ಲಿ ಬಳಕೆಗೆ ಯೋಗ್ಯವಲ್ಲದ ಚರಂಡಿಯ ನೀರನ್ನು ಸ್ಥಳದಲ್ಲೇ ಶುದ್ಧ ಕುಡಿಯುವ ನೀರನ್ನಾಗಿ ಪರಿವರ್ತಿಸುತ್ತದೆ. ಕಿರಿದಾದ ಪ್ರದೇಶಗಳಿಗೂ ಕೊಂಡೊಯ್ಯಬಹುದಾದ ಚಿಕ್ಕ ವಾಹನದಲ್ಲಿ ಯಂತ್ರವನ್ನು ಅಳವಡಿಸಲಾಗಿದೆ. ಕೃತಕ ಬುದ್ಧಿಮತ್ತೆಯ ತಾಂತ್ರಿಕತೆಯನ್ನು ಬಳಸಿ ಈ ಯಂತ್ರವನ್ನು ತಯಾರಿಸಲಾಗಿದ್ದು, ದಿನಕ್ಕೆ 15ರಿಂದ 20 ಸಾವಿರ ಲೀಟರ್ ನೀರನ್ನು ಸಂಸ್ಕರಿಸುತ್ತದೆ. ಇದೇ ಮಾದರಿಯ ದೊಡ್ಡ ಯಂತ್ರ 80 ಸಾವಿರ ಲೀಟರ್ ನೀರನ್ನು ಸಂಸ್ಕರಿಸಲಾಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹುಲಿಗೆಮ್ಮ ದೇವಸ್ಥಾನಕ್ಕೆ ಪ್ರವಾಹ ಭೀತಿ