Publish Date: Fri, 24 Dec 2021 (06:19 IST)
Updated Date: Fri, 24 Dec 2021 (06:57 IST)
ಬೆಳಗಾವಿ : ಮತಾಂತರ ನಿಷೇಧ ಕಾಯ್ದೆ ಜನಪರ ಹಾಗೂ ಸಂವಿಧಾನಬದ್ಧವಾದ ಕಾಯ್ದೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಳಗಾವಿಯ ಸುವರ್ಣಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಶೇಷವಾಗಿ ಎಸ್ಸಿ, ಎಸ್ಟಿ, ಬಡವರ ಪರವಾದ ಕಾಯ್ದೆಯಾಗಿದೆ.
ಬರುವ ದಿನಗಳಲ್ಲಿ ಎಲ್ಲಾ ಜನಾಂಗಗಳ ರಕ್ಷಣೆ ಜೊತೆ ಅವರ ಸ್ವಾಭಿಮಾನವನ್ನು ಎತ್ತಿಹಿಡಿಯಲು ನೆರವಾಗುತ್ತದೆ.
ಈ ಕಾಯ್ದೆಯನ್ನು ಜಾರಿಗೊಳಿಸುವಲ್ಲಿ ಸರ್ಕಾರದ ಸ್ಪಷ್ಟ ನೀತಿಯಿದೆ. ಬಡತನ, ನಿರುದ್ಯೋಗ, ಶಿಕ್ಷಣದ ಕೊರತೆಯಿರುವ ಜನರಿಗೆ ಆಸೆ ಆಮಿಷಗಳನ್ನು ಒಡ್ಡುವ ಮೂಲಕ ಮತಾಂತರಕ್ಕೆ ಒತ್ತಾಯ ಮಾಡುತ್ತಿರುವುದಕ್ಕೆ ಸರ್ಕಾರದ ವಿರೋಧವಿದೆ ಎಂದು ತಿಳಿಸಿದರು.