Publish Date: Wed, 02 Feb 2022 (06:09 IST)
Updated Date: Tue, 01 Feb 2022 (23:11 IST)
ಬೆಂಗಳೂರು : ಅನಧಿಕೃತ ಫ್ಲೆಕ್ಸ್ ಮುಕ್ತಗೊಳಿಸುವ ಅಭಿಯಾನಕ್ಕೆ ಸಹಕರಿಸಿ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮನವಿ ಮಾಡಿದ್ದಾರೆ.
ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಪ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಭಿತ್ತಿಪತ್ರಗಳು ಸೇರಿದಂತೆ ಇನ್ನಿತರೆ ಜಾಹೀರಾತು ಹಾಗೂ ಖಾಸಗಿ ಸ್ವತ್ತುಗಳಲ್ಲಿ ಅಳವಡಿಸಿರುವ ವಾಣಿಜ್ಯ ಜಾಹೀರಾತು, ಬೃಹತ್ ಎಲ್ಇಡಿ ಜಾಹೀರಾತು, ಸೈಕಲ್ ಜಾಹೀರಾತು ಮುಕ್ತಗೊಳಿಸುವ ಅಭಿಯಾನಕ್ಕೆ ಕೈಜೋಡಿಸಿ ಎಂದು ಕೇಳಿಕೊಂಡಿದ್ದಾರೆ.
ರೆಸಿಡೆಂಟ್ ವೆಲ್ಫೇರ್ ಅಸೋಸಿಯೇಷನ್ಸ್ ಹಾಗೂ ಸರ್ಕಾರೇತರ ಸಂಸ್ಥೆಗಳು, ಜನರಿಗೆ ಬಿಬಿಎಂಪಿ ಮನವಿ ಮಾಡಿದೆ. ಹಾಫ್ ಹೆಲ್ಮೆಟ್ ಧರಿಸದಂತೆ ಬೈಕ್ ಸವಾರರಿಗೆ ಬೆಂಗಳೂರು ಸಂಚಾರಿ ಪೊಲೀಸರಿಂದ ಜಾಗೃತಿ ಅಭಿಯಾನ ಬೆಂಗಳೂರು ಸಂಚಾರಿ ಪೊಲೀಸರಿಂದ ಬೈಕ್ ಸವಾರರಿಗೆ ಜಾಗೃತಿ ಅಭಿಯಾನ ನಡೆಸಲಾಗಿದೆ.