ಮೀಸಲಾತಿ ಹೆಚ್ಚಳಕ್ಕೆ ಸಹಕಾರ : ಪ್ರಹ್ಲಾದ್ ಜೋಶಿ

Webdunia
ಸೋಮವಾರ, 22 ಆಗಸ್ಟ್ 2022 (13:48 IST)
ಬೆಂಗಳೂರು : ನ್ಯಾ. ನಾಗಮೋಹನ್ ದಾಸ್ ಆಯೋಗದ ವರದಿ ಜಾರಿಗೊಳಿಸುವ ನಿಟ್ಟಿನಲ್ಲಿ ಕಾನೂನಾತ್ಮಕ ಸಹಕಾರ ನೀಡುವುದಾಗಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಕಳೆದ ಆರು ತಿಂಗಳುಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಯವರು ನಡೆಸುತ್ತಿರುವ ಧರಣಿ ಸತ್ಯಾಗ್ರಹದ ಸ್ಥಳಕ್ಕೆ ಭೇಟಿ ನೀಡಿದ ಜೋಶಿ, ಸ್ವಾಮೀಜಿಯವರ ಆರೋಗ್ಯ ವಿಚಾರಿಸಿದರು. 

ಶೇ.7.5 ಕ್ಕೆ ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳ ಸೇರಿದಂತೆ ನಾಗಮೋಹನ್ ದಾಸ್ ವರದಿ ಜಾರಿಗೆ ಆಗ್ರಹಿಸಿ ಪ್ರಸನ್ನಾನಂದ ಸ್ವಾಮೀಜಿಯವರು ಧರಣಿ ನಡೆಸುತ್ತಿದ್ದಾರೆ. ಶೇ.3 ರಷ್ಟು ಇರುವ ಎಸ್ಟಿ ಮೀಸಲಾತಿ ಹೆಚ್ಚಳ ಕುರಿತಂತೆ ಕಾನೂನಾತ್ಮಕವಾಗಿ ಸಹಕಾರ ನೀಡಲು ಸಿದ್ಧ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸ್ವಾಮೀಜಿ ಅವರಿಗೆ ಭರವಸೆ ನೀಡಿದ್ದಾರೆ.

ಸ್ವಾಮೀಜಿಯವರನ್ನ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಜೋಶಿ, ಪ್ರಸನ್ನಾನಂದ ಸ್ವಾಮೀಜಿ ಅವರ ಬೇಡಿಕೆಗಳನ್ನ ಆಲಿಸಿದರು. ನಾಗಮೋಹನ್ ದಾಸ್ ವರದಿ ಜಾರಿ ಕುರಿತ ಸ್ವಾಮೀಜಿ ಅವರ ಬೇಡಿಕೆಗೆ ಸ್ಪಂದಿಸಿರುವ ಕೇಂದ್ರ ಸಚಿವರು, ಈ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡುವುದಾಗಿ ಸ್ವಾಮೀಜಿಯವರಿಗೆ ತಿಳಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗ್ಪುರ ಕಾರ್ಖಾನೆ ಸ್ಫೋಟದಲ್ಲಿ 18ಮಂದಿ ಸಾವು ಪ್ರಕರಣ, ಮಹತ್ವದ ಬೆಳವಣಿಗೆ

ಎಲ್ಲರಿಗೂ ಫ್ರೀ ಗ್ಯಾರಂಟಿ ಕೊಡೋದು ಕಷ್ಟ: ಎಚ್ ಸಿ ಬಾಲಕೃಷ್ಣ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮ ಬಾಸ್ ಖಮೇನಿ ಕೊಲ್ಲಲು ಹೇಳಿಕೊಟ್ಟಿದ್ದು ಮೋದಿಯೇ: ಭಾರತೀಯ ಬಾಲಕನ ಮಾತು ಕೇಳಿದ್ರೆ ಶಾಕ್ ಆಗ್ತೀರಿ Video

ಭಾರತದ ದಾಳಿಯಿಂದಲೇ ಇನ್ನೂ ಎದ್ದಿಲ್ಲ, ಆಗಲೇ ಅಫ್ಘಾನಿಸ್ತಾನದಿಂದಲೂ ಪಾಕಿಸ್ತಾನದ ವಾಯುನೆಲೆ ಮೇಲೆ ದಾಳಿ

ಮುಂದಿನ ಸುದ್ದಿ
Show comments