Select Your Language

Notifications

webdunia
webdunia
webdunia
webdunia

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ ಸಹಕಾರ ಸಚಿವ ಕೆ.ಎನ್‌. ರಾಜಣ್ಣ

Cooperation Minister KN Rajanna

Sampriya

ತುಮಕೂರು , ಶನಿವಾರ, 14 ಸೆಪ್ಟಂಬರ್ 2024 (14:17 IST)
Photo Courtesy X
ತುಮಕೂರು: ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯುತ್ತಿರುವುದಾಗಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಇಂದು ಘೋಷಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭೆ ಸೇರಿದಂತೆ ಮುಂದಿನ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಆದರೆ, ಸಕ್ರಿಯ ರಾಜಕೀಯದಲ್ಲಿ ಇರುತ್ತೇನೆ. ಬೇಕಾದವರನ್ನು ಗೆಲ್ಲಿಸುವುದು, ಬೇಡದವರನ್ನು ಸೋಲಿಸುವ ಕೆಲಸ ಮುಂದುವರಿಸುತ್ತೇನೆ ಎಂದು ಹೇಳಿದರು.

ನಾನು ಪ್ರತಿನಿಧಿಸುವ ಮಧುಗಿರಿಯನ್ನು ಜಿಲ್ಲಾ ಕೇಂದ್ರ ಮಾಡುವ ಪ್ರಯತ್ನ ಮುಂದುವರಿಸುತ್ತೇನೆ. ನನ್ನ ಅಧಿಕಾರ ಮುಗಿಯುವುದರ ಒಳಗೆ ಜಿಲ್ಲಾ ಕೇಂದ್ರ ಮಾಡಿಸುತ್ತೇನೆ ಎಂದು ತಿಳಿಸಿದರು.

ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿಸುತ್ತೇನೆ. ಮುಂದಿನ ಚುನಾವಣೆ ದೃಷ್ಟಿಯನ್ನು ಇಟ್ಟುಕೊಂಡು ಈ ಕೆಲಸ ಮಾಡಿಸುತ್ತಿಲ್ಲ. ಜನರ ಸಂಕಷ್ಪಗಳಿಗೆ ಯಾವಾಗಲು ಸ್ಪಂದಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ರಾಹುಲ್ ಗಾಂಧಿ ಪ್ರತಿಕೃತಿ ದಹಿಸಲು ಹೊರಟ ಬಿಜೆಪಿ ನಾಯಕರ