Webdunia - Bharat's app for daily news and videos

Install App

ಮಾದಕ ವಸ್ತುಗಳ ಮಾರಾಟ ಆರೋಪಿಗಳ ಬಂಧನ

Webdunia
ಶನಿವಾರ, 5 ಫೆಬ್ರವರಿ 2022 (14:24 IST)
ಮಾದಕ ವಸ್ತು ಗಾಂಜಾ ಪೊಟ್ಟಣಗಳನ್ನು ಬೈಕ್‍ನಲ್ಲಿಟ್ಟುಕೊಂಡು ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ರಾಜಾಜಿನಗರದ ಯಾಸಿರ್(33), ರಾಜಗೋಪಾಲನಗರದ ಬೈರೇಶ್(23) ಬಂಧಿತರು. ಬಂಧಿತರಿಂದ 1 ಕೆಜಿ 200 ಗ್ರಾಂ ಗಾಂಜಾ, 700 ನಗದು, 8.55 ಲಕ್ಷ ರೂ. ಬೆಲೆ ಬಾಳುವ 8 ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
 
ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಫೆ.3ರಂದು ಇಬ್ಬರು ಬೈಕ್‍ನಲ್ಲಿ ಗಾಂಜಾ ಪೊಟ್ಟಣಗಳನ್ನಿಟ್ಟುಕೊಂಡು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾರೆಂಬ ಮಾಹಿತಿಪೊಲೀಸರಿಗೆ ಲಭಿಸಿದೆ. ಇನ್‍ಸ್ಪೆಕ್ಟರ್ ವಸಂತ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಇಬ್ಬರನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಮಾದಕ ವಸ್ತುವನ್ನು ಆಂಧ್ರದಿಂದ ತರಿಸಿಕೊಂಡು ಮಾರಾಟ ಮಾಡಲು ಬಂದಿರುವುದಾಗಿ ತಿಳಿಸಿದ್ದಾರೆ.
 
ಆರೋಪಿಗಳು ಕೆಂಗೇರಿ, ಜ್ಞಾನಭಾರತ, ಎಚ್‍ಎಎಲ್, ಬಾಗಲಗುಂಟೆ, ಮಾದನಾಯಕನಹಳ್ಳಿ, ಬಿಡದಿ ಹಾಗೂ ರಾಮನಗರ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಮನೆಗಳ ಮುಂದೆ, ಪಾರ್ಕಿಂಗ್ ಸ್ಥಳಗಳಲ್ಲಿ ನಿಲ್ಲಿಸಿದ್ದಂತಹ ದ್ವಿಚಕ್ರ ವಾಹನಗಳನ್ನು ಕಳವು ಮಾಡಿರುವುದಾಗಿ ತಿಳಿಸಿದ ಮೇರೆಗೆ ಪೊಲೀಸರು 8 ದ್ವಿಚಕ್ರ ವಾಹನಗಳನ್ನು ಹಾಗೂ ಮಾದಕವಸ್ತು ಗಾಂಜಾ, ಹಣ ವಶಪಡಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ