Publish Date: Tue, 13 Jul 2021 (20:27 IST)
Updated Date: Tue, 13 Jul 2021 (20:29 IST)
ಕಳೆದ 24 ಗಂಟೆಯಲ್ಲಿ 31,443 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, 2020 ಮಂದಿ ಅಸುನೀಗಿದ್ದಾರೆ. ಈ ಮೂಲಕ 118 ದಿನದಲ್ಲೇ ಕನಿಷ್ಠ ಪ್ರಮಾಣದ ಸೋಂಕು ಪ್ರಕರಣಗಳು ದೇಶದಲ್ಲಿ ಪತ್ತೆಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಬಿಡುಗಡೆ ಮಾಡಿದ ಬುಲೆಟಿನ್ ಪ್ರಕಾರ ದೇಶದಲ್ಲಿ ಒಟ್ಟಾರೆ ಸಾವಿನ ಸಂಖ್ಯೆ 4,10,784 ಕ್ಕೆ ಏರಿಕೆಯಾಗಿದೆ. ಸಕ್ರಿಯ ಸೋಂಕಿತರ ಸಂಖ್ಯೆ 4, 31,315ಕ್ಕೆ ಇಳಿಕೆಯಾಗಿದ್ದು, ಕಳೆದ 109 ದಿನಗಳಲ್ಲಿ ಅತ್ಯಂತ ಕಡಿಮೆಯಾಗಿದೆ.
ಒಂದು ದಿನದಲ್ಲಿ 49,007 ಮಂದಿ ರೋಗಿಗಳು ಗುಣಮುಖರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 3 ಲಕ್ಷದ 63 ಸಾವಿರದ 720ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 17 ಲಕ್ಷದ 40 ಸಾವಿರದ 325 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 43 ಕೋಟಿಯ 40 ಲಕ್ಷದ 58 ಸಾವಿರದ 138 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.