ದೇಶದಲ್ಲಿ ಕಳೆದ 24 ಗಂಟೆಯಲ್ಲಿ 38,792 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಹಿಂದಿನ ದಿನಕ್ಕೆ ಹೋಲಿಸಿದರೆ ಶೇ.23ರಷ್ಟು ಏರಿಕೆಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಂದು ದಿನದಲ್ಲಿ 624 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.