Publish Date: Sun, 28 Jun 2020 (17:37 IST)
Updated Date: Sun, 28 Jun 2020 (17:38 IST)
ವೈದ್ಯರೊಬ್ಬರು ಹಾಗೂ ಮೂವರು ಆಶಾ ಕಾರ್ಯಕರ್ತೆಯರಿಗೆ ಕೊರೊನಾ ವೈರಸ್ ತಗುಲಿದೆ.
ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ಮೂವರು ಆಶಾ ಕಾರ್ಯಕರ್ತೆಯರು ಹಾಗೂ ಹಿರೇಕೆರೂರ ತಾಲ್ಲೂಕಿನ ಮಾಸೂರ ಗ್ರಾಮದ ಓರ್ವ ಸರ್ಕಾರಿ ವೈದ್ಯ ಸೇರಿದಂತೆ 12 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
ಜಿಲ್ಲೆಯಲ್ಲಿ ಈವರೆಗೆ 68 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ 25 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
43 ಪ್ರಕರಣಗಳು ಸಕ್ರಿಯವಾಗಿವೆ. ಈ ಪೈಕಿ ಓರ್ವ ಸೋಂಕಿತರಿಗೆ ಐ.ಸಿ.ಯು.ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ತಿಳಿಸಿದ್ದಾರೆ.
Jagadeesh
Publish Date: Sun, 28 Jun 2020 (17:37 IST)
Updated Date: Sun, 28 Jun 2020 (17:38 IST)