ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈಗ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ನಿವಾಸಿಯಾದ ಮಹಿಳೆಯೊಬ್ಬರಿಗೆ ಈ ಸೋಂಕು ಕಾಣಿಸಿಕೊಂಡಿದೆ.ಸೋಂಕಿತ 13ನೇ ವ್ಯಕ್ತಿ ಜತೆ ಈ ಮಹಿಳೆ ಸಂಪರ್ಕದಲ್ಲಿದ್ದರು. ಇದೀಗ ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ನಲ್ಲಿ ಮಹಿಳೆಗೆ ಚಿಕಿತ್ಸೆ ನೀಡಲಾಗುತ್ತಿದೆ.