ಕೊರೊನಾ ಕೇಸ್ ಹೆಚ್ಚಳ : ಜಿಲ್ಲಾ ಕೇಂದ್ರ ಸಂಪೂರ್ಣ ಸೀಲ್ ಡೌನ್

Webdunia
ಶುಕ್ರವಾರ, 17 ಏಪ್ರಿಲ್ 2020 (19:17 IST)
ಕೊರೊನಾ ವೈರಸ್ ಕೇಸ್ ಹೆಚ್ಚಾದ ಪರಿಣಾಮ ಜಿಲ್ಲಾ ಕೇಂದ್ರದ ನಗರವನ್ನೇ ಡಿಸಿವೊಬ್ಬರು ಸೀಲ್ ಡೌನ್ ಮಾಡಿದ್ದಾರೆ.

ಚಿಕ್ಕಬಳ್ಳಾಪುರ ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ನಗರವನ್ನು ಸಂಪೂರ್ಣ ಸೀಲ್‍ಡೌನ್ ಮಾಡಲಾಗುತ್ತಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.

ಹೊಸದಾಗಿ ಮೂರು ಕೊರೊನಾ ಕೇಸ್ ದೃಢವಾದ ಹಿನ್ನಲೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಂತರ ಮಾತನಾಡಿದ ಜಿಲ್ಲಾಧಿಕಾರಿ ಆರ್.ಲತಾ, 17 ನೇ ವಾರ್ಡಿನಲ್ಲಿ ಕೊರೊನಾ ಗೆ ಮೃತನಾದ ವೃದ್ಧನ ಕೊನೆಯ ಮಗ ಹಾಗೂ ಎದುರುಗಡೆ ಮನೆಯ ಇಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದರು.

ಮುನ್ನೆಚ್ಚರಿಕೆ ಕ್ರಮವಾಗಿ ವೃದ್ಧ ಮೃತಪಟ್ಟಾಗ 17ನೇ ವಾರ್ಡು ಸೇರಿದಂತೆ ಅಕ್ಕ ಪಕ್ಕದ ನಾಲ್ಕು  ವಾರ್ಡುಗಳನ್ನು ಮಾತ್ರ ಸೀಲ್‍ಡೌನ್ ಮಾಡಲಾಗಿತ್ತು. ಈಗ ಸೋಂಕಿತರ ಸಂಖ್ಯೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಇಡೀ ಚಿಕ್ಕಬಳ್ಳಾಪುರ ನಗರವನ್ನೇ ಸಂಪೂರ್ಣ ಸೀಲ್‍ಡೌನ್ ಮಾಡಲಾಗುತ್ತಿದೆ. ಆಯಾ ವಾರ್ಡುವಾರು ಸ್ವಯಂಸೇವಕರ ಮೂಲಕ ಅಗತ್ಯ ವಸ್ತುಗಳನ್ನು ಮನೆ ಬಾಗಿಲಿಗೇ  ತಲುಪಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಕಾರಣದಲ್ಲಿ ಇಂತಹ ಘಟನೆಗಳು ಸಾಮಾನ್ಯ, ಧೃತಿಗೆಡಬೇಡಿ: ಪ್ರದೀಪ್ ಈಶ್ವರ್‌ಗೆ ಸಿದ್ಧರಾಮಯ್ಯ ಧೈರ್ಯ

ರೆಸ್ಟೋರೆಂಟ್‌ನ ಚಿಮಿಣಿಯಲ್ಲಿ ಸಂಗ್ರಹವಾದ ಎಣ್ಣೆಯಿಂದ ಬೆಂಕಿ, ದೆಹಲಿಯಲ್ಲಿ ತಪ್ಪಿದ ದೊಡ್ಡ ಅವಘಡ, Video

ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಆತ್ಮಹತ್ಯೆ, ಪತಿ, ಅತ್ತೆ, ಮಾವನ ವಿರುದ್ಧದ ಮಹತ್ವದ ತೀರ್ಪು

ಕೇತನ್ ಅಗರ್ವಾಲ್ ಹತ್ಯೆ ಬಳಿಕ ಪುಣೆ ಕೋಟೆಗೆ ಪ್ರವಾಸಿಗರ ದಂಡು, ಸಿಕ್ತು ಹೊಸ ನಾಮಕರಣ

ಫುಲ್ ಟ್ಯಾಂಕ್ ಪೆಟ್ರೋಲ್ ಹಾಕಿಸಿಕೊಂಡು ಕಾರು ಚಾಲಕ ಈ ರೀತಿ ನಡೆಸುಕೊಳ್ಳುವುದಾ, Video

ಮುಂದಿನ ಸುದ್ದಿ
Show comments