ಕೊರೊನಾ ಕರ್ಫ್ಯೂ : ದಿನಕ್ಕೆ 100 ಬೈಕ್ ಗಳನ್ನು ವಶಪಡಿಸಿಕೊಳ್ಳಿ ಎಂದ ಉಪಮುಖ್ಯಮಂತ್ರಿ

Webdunia
ಭಾನುವಾರ, 29 ಮಾರ್ಚ್ 2020 (16:38 IST)
ಕೊರೋನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ  ಕರ್ಫ್ಯೂ ಹೇರಲಾಗಿದ್ದರೂ, ತಿರುಗಾಡುವವರನ್ನು ಗುರುತಿಸಿ ದಿನಕ್ಕೆ 100 ಬೈಕ್ ಗಳನ್ನು ವಶಕ್ಕೆ ಪಡೆದುಕೊಳ್ಳಿ ಅಂತ ಡಿಸಿಎಂ ಹೇಳಿದ್ದಾರೆ. 

ಕರ್ಫ್ಯೂ ಉಲ್ಲಂಘನೆ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ  ಉಪಮುಖ್ಯಮಂತ್ರಿಗಳು, ಸಮಾಜ ಕಲ್ಯಾಣ, ಲೋಕೋಪಯೋಗಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ. ಕಾರಜೋಳ ಸೂಚಿಸಿದ್ದಾರೆ.

ಕಲಬುರಗಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಕೊರೋನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಪರಿಶೀಲನಾ ಸಭೆ ನಡೆಸಿದ ಬಳಿಕ  ಅವರು ಸುದ್ದಿಗೋಷ್ಠಿಯಲ್ಲಿ  ಮಾತನಾಡುತ್ತಿದ್ದರು.

 ನಿಷೇಧಾಜ್ಞೆ  ಉಲ್ಲಂಘಿಸಿ ಓಡಾಡುವರ ಬೈಕ್ ಗಳನ್ನು ಜಫ್ತಿ ಮಾಡಬೇಕು. ಕನಿಷ್ಠ ದಿನಕ್ಕೆ 100 ಬೈಕ್ ವಶಪಡಿಸಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ಇದೇವೇಳೆ ಸಾಮಾಜಿಕ ಜಾಲತಾಣಗಳು ಸುಳ್ಳು ಸುದ್ದಿ ಪ್ರಕಟಿಸುವ ಮೂಲಕ  ಸಮಾಜದಲ್ಲಿ ಗೊಂದಲ ಉಂಟು ಮಾಡುತ್ತಿವೆ. ಇಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಬರೀ ಎಚ್ಚರಿಕೆ ನೀಡಿದರೆ ಸಾಲದು, ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಖಡಕ್ಕಾಗಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ನಿವಾಸಿಗಳಿಗೆ ಗುಡ್‌ನ್ಯೂಸ್‌: ನ.1ರಿಂದಲೇ ಬಿಖಾತಾದಿಂದ ಎ ಖಾತಾ ಪರಿವರ್ತನೆ ಅಭಿಯಾನ

ಜಾತಿವಾರು ಸಮೀಕ್ಷೆಗೆ ಮಾಹಿತಿ ನೀಡಲು ನಾರಾಯಣಮೂರ್ತಿ ಕುಟುಂಬ ಹಿಂದೇಟು: ಕಾರಣ ಏನು ಗೊತ್ತಾ

ಕೊಪ್ಪಳದಲ್ಲಿ ರೈತರಿಗೆ ಸಲಹೆ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್, ಹೇಳಿದ್ದೇನು ಗೊತ್ತಾ

ಕೇದಾರನಾಥ ಯಾತ್ರಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಅದಾನಿ ಸಮೂಹ, ಇಲ್ಲಿದೆ ಮಾಹಿತಿ

ನನ್ನನ್ನು ಸರ್ ಎಂದು ಕರೆಯಬೇಡಿ, ಬಿಹಾರದ ಮಹಿಳಾ ಕಾರ್ಯಕರ್ತೆಗೆ ಮೋದಿ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments