Select Your Language

Notifications

webdunia
webdunia
webdunia
webdunia

ಕೊರೊನಾ ಎಫೆಕ್ಟ್ : ಹೋಮ್ ಐಸೊಲೇಷನ್‌ನಲ್ಲಿ 56 ಜನ

ಕೊರೊನಾ ಎಫೆಕ್ಟ್ : ಹೋಮ್ ಐಸೊಲೇಷನ್‌ನಲ್ಲಿ 56 ಜನ
ಯಾದಗಿರಿ , ಸೋಮವಾರ, 23 ಮಾರ್ಚ್ 2020 (18:18 IST)
ಕೊರೊನಾ ಭೀತಿ ಹಿನ್ನಲೆಯಲ್ಲಿ ದುಬೈ,ಕತಾರ್, ಸೌದಿಯಿಂದ ಬಂದವರನ್ನು ಐಸೋಲೇಷನ್ ಗೆ ಒಳಪಡಿಸಲಾಗಿದೆ.

ಯಾದಗಿರಿ ತಾಲ್ಲೂಕಿನಲ್ಲಿ 22, ಶಹಾಪೂರ ತಾಲ್ಲೂಕಿನಲ್ಲಿ 16 ಹಾಗೂ ಸುರಪುರ ತಾಲ್ಲೂಕಿನಲ್ಲಿ 18 ಸೇರಿದಂತೆ ಮಾರ್ಚ್ 22 ರವರೆಗೆ ಜಿಲ್ಲೆಯಲ್ಲಿ ಒಟ್ಟು 56 ಜನ ದುಬೈ, ಕತಾರ, ಸೌದಿ, ಮದಿನಾ ಪ್ರವಾಸದಿಂದ ಮರಳಿದ್ದಾರೆ. ಇವರನ್ನು ವೈದ್ಯಕೀಯ ತಪಾಸಣೆಗೊಳಪಡಿಸಲಾಗಿದೆ. ಯಾವುದೇ ರೋಗಲಕ್ಷಣಗಳು ಕಂಡುಬಂದಿರುವುದಿಲ್ಲ. ಕಾರಣ ಇವರಿಗೆ ಹೋಮ್ ಐಸೊಲೇಷನ್ ವ್ಯವಸ್ಥೆ ಮಾಡಲಾಗಿದೆ ಎಂದು ಯಾದಗಿರಿ ಅಪರ  ಜಿಲ್ಲಾಧಿಕಾರಿ  ಪ್ರಕಾಶ್ ಜಿ.ರಜಪೂತ್ ತಿಳಿಸಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ವಿದೇಶಗಳಿಂದ ಬಂದವರನ್ನು ದಿನಕ್ಕೆ 2 ಬಾರಿಯಂತೆ 14 ದಿನಗಳ ಕಾಲ ವೈದ್ಯಕೀಯ ತಂಡ ಭೇಟಿ ನೀಡಿ ತಪಾಸಣೆ ನಡೆಸುತ್ತಿದೆ. ಇವರ ಕುಟುಂಬದ ಸದಸ್ಯರ ಮೇಲೆಯೂ ನಿಗಾವಹಿಸಲಾಗಿದೆ.

ಶಹಾಪುರ ಆಸ್ಪತ್ರೆಯಲ್ಲಿ ಒಬ್ಬರನ್ನು ಪ್ರತ್ಯೇಕವಾಗಿರಿಸಿ, ಐಸೊಲೇಷನ್ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಶಂಕಿತ ಅಥವಾ ಖಚಿತ ಕೊರೋನಾ ವೈರಸ್ ಪ್ರಕರಣ ಪತ್ತೆಯಾಗಿರುವುದಿಲ್ಲ. ಜಿಲ್ಲಾಡಳಿತವು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಆತಂಕಪಡಬಾರದು ಅವರು ಮನವಿ ಮಾಡಿದ್ದಾರೆ.Share this Story:

Follow Webdunia kannada

ಮುಂದಿನ ಸುದ್ದಿ

ವ್ಯಾಪಾರ, ಉದ್ದಿಮೆ ಬಂದ್ ಮಾಡಿ ಎಂದ ಛೇಂಬರ್