Select Your Language

Notifications

webdunia
webdunia
webdunia
webdunia

ಗಣೇಶೋತ್ಸವ ಮೇಲೆ ಕೊರೊನಾ ಎಫೆಕ್ಟ್ : ಸಚಿವ ಹೇಳಿದ್ದೇನು?

ಗಣೇಶ ಉತ್ಸವ
ಕೊರೊನಾ ತಡೆಗೆ ವ್ಯಾಪಕ ಕ್ರಮ ಕೈಗೊಳ್ಳಲಾಗಿದ್ದು ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದು ಸಚಿವರೊಬ್ಬರು ಹೇಳಿದ್ದಾರೆ.

ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಹೇಳಿಕೆ ನೀಡಿದ್ದು, ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿರುವ ಪ್ರಯೋಗಾಲಯದಲ್ಲಿ ನಿತ್ಯ 300-400 ಸೊಂಕಿತರ ಗಂಟಲು ದ್ರವದ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ.

ಈವರೆಗೆ ಜಿಲ್ಲೆಯಲ್ಲಿ 9 ಸಾವಿರ ಜನರ ಗಂಟಲು ದ್ರವದ ಮಾದರಿ ಪರೀಕ್ಷೆ ಮಾಡಲಾಗಿದೆ. ಕೊವಿಡ್-19 ಚಿಕಿತ್ಸೆಗಾಗಿ ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸುಮಾರು 922 ಹಾಸಿಗೆಗಳನ್ನು ಸಿದ್ಧಪಡಿಸಲಾಗಿದೆ ಎಂದಿದ್ದಾರೆ.

ಈ ವರ್ಷದ ಗಣೇಶೋತ್ಸವವನ್ನು ಸರಳವಾಗಿ ಆಚರಿಸಬೇಕಾದ ಅನಿವಾರ್ಯತೆ ಇದೆ. ಈ ಬಗ್ಗೆ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಲಿದೆ ಎಂದು ಸಚಿವರು ಹೇಳಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಪ್ರತಿಜ್ಞಾ ಸ್ವೀಕಾರ