Select Your Language

Notifications

webdunia
webdunia
webdunia
webdunia

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸ್ಪೋಟ : 12 ದಿನದಲ್ಲಿ 501 ಕೇಸ್ ಪತ್ತೆ..!

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸ್ಪೋಟ : 12 ದಿನದಲ್ಲಿ 501 ಕೇಸ್ ಪತ್ತೆ..!
bangalore , ಸೋಮವಾರ, 6 ಡಿಸೆಂಬರ್ 2021 (20:06 IST)
ಬೆಂಗಳೂರು : ಒಮಿಕ್ರಾನ್  ಆತಂಕದ ಬೆನ್ನಲ್ಲೇ ರಾಜ್ಯದ ಶಾಲೆ, ಕಾಲೇಜುಗಳಲ್ಲಿ  ಕೊರೊನಾ ಸ್ಪೋಟವಾಗಿದ್ದು, ಕಳೆದ 12 ದಿನಗಳಲ್ಲಿ ಒಟ್ಟು 501 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಚಿಕ್ಕಮಗಳೂರು, ಧಾರವಾಡ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಸಮೀಪದ ಸೀಗೋಡು ಜವಾಹರ್ ನವೋದಯ ವಿದ್ಯಾಲಯದಲ್ಲಿ 62 ವಿದ್ಯಾರ್ಥಿಗಳಿಗೆ, ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸ್ಪೂರ್ತಿ ನರ್ಸಿಂಗ್ ಕಾಲೇಜಿನಲ್ಲಿ 7 ಮತ್ತು ದಿ ಇಂಟರ್ ನ್ಯಾಷನಲ್ ಸ್ಕೂಲಿನಲ್ಲಿ 5 ಮಂದಿಗೆ ಕೊರೊನಾ ಸೋಮಕು ದೃಢಪಟ್ಟಿದೆ.
ಇನ್ನು ಕೆಲ ದಿನಗಳ ಹಿಂದೆ ಧಾರವಾಡದ ಎಸ್ ಡಿಎಂ ಮೆಡಿಕಲ್ ಕಾಲೇಜಿನಲ್ಲಿ 300 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಈ ಮೂಲಕ ಕೇವಲ 12 ದಿನದಲ್ಲೇ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಒಟ್ಟು 500 ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಜವಾದ್ ಚಂಡಮಾರುತ ಪ್ರಭಾವ: ಒಡಿಶಾದಲ್ಲಿ ಭಾರಿ ಮಳೆ