Publish Date: Sat, 04 Jul 2020 (16:23 IST)
Updated Date: Sat, 04 Jul 2020 (16:24 IST)
ಕೊರೊನಾ ವೈರಸ್ ಪಾಸಿಟಿವ್ ಕಂಡು ಬಂದಿದ್ದ ವ್ಯಕ್ತಿಯೊಬ್ಬ ಕೋವಿಡ್ ವಾರ್ಡ್ ನಿಂದ ಪರಾರಿಯಾಗಿದ್ದಾನೆ.
ಹುಬ್ಬಳ್ಳಿಯ ಕಿಮ್ಸ್ ಕೋವಿಡ್ ವಾರ್ಡಿನಿಂದ ಪರಾರಿಯಾಗಿದ್ದ ಕೋವಿಡ್ ಸೋಂಕಿತನ್ನು ಈಗಾಗಲೇ ಪೋಲಿಸರು ಬಂಧಿಸಿದ್ದು, ಕಿಮ್ಸ್ ನಲ್ಲಿ ಇನ್ನಷ್ಟು ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಆರ್.ದಿಲೀಪ್ ಹೇಳಿದ್ದಾರೆ.
ಪೊಲೀಸರು ಸಾರ್ವಜನಿಕರ ಮಧ್ಯೆ ಇರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಹರಡುತ್ತಿದೆ. ಈ ಬಗ್ಗೆ ನಾವು ಹೆಚ್ಚಿನ ಜಾಗೃತಿ ವಹಿಸಲು ಸಿಬ್ಬಂದಿಗೆ ಸೂಚನೆ ನೀಡಿ ಮುಂಜಾಗ್ರತಾ ಕ್ರಮವಾಗಿ ರಕ್ಷಾ ಕವಚಗಳನ್ನು ನೀಡಿದ್ದೇವೆ.
ವಯಸ್ಸಾದ ಪೊಲೀಸ್ ಸಿಬ್ಬಂದಿಗಳಿಗೆ ವರ್ಕ್ ಫಾರ್ಮ್ ಹೋಮ್ ಮಾಡಿದ್ದೇವೆ. ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಮಾತ್ರೆಗಳನ್ನು ವಿತರಿಸಿದ್ದೇವೆ ಎಂದರು.