Publish Date: Sat, 15 Jan 2022 (14:46 IST)
Updated Date: Sat, 15 Jan 2022 (16:15 IST)
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಪತ್ನಿ, ಶಾಸಕಿ ಅನಿತಾ ಕುಮಾರಸ್ವಾಮಿಗೆ ಕರೊನಾ ಸೋಂಕು ದೃಢಪಟ್ಟಿದೆ. ಶನಿವಾರ ಬೆಳಗ್ಗೆ ವರದಿಯಲ್ಲಿ ಕರೊನಾ ಪಾಸಿಟಿವ್ ಬಂದಿದೆ. ಸದ್ಯ ಬೆಂಗಳೂರಿನ ನಿವಾಸದಲ್ಲೇ ಅನಿತಾ ಕುಮಾರಸ್ವಾಮಿ ಅವರು ಚಿಕಿತ್ಸೆ ಪಡೆಯುತ್ತಿದ್ದು, ಹೋಂ ಐಸೋಲೇಷನ್ ಆಗಿದ್ದಾರೆ.
ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚತ್ತಲೇ ಇದ್ದು, ಹಲವು ರಾಜಕೀಯ ನಾಯಕರಿಗೂ ಸೋಂಕು ತಗುಲಿದೆ. ಸಿಎಂ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಚಿವ ಮಾಧುಸ್ವಾಮಿ, ಮಾಜಿ ಸಚಿವ ಎಚ್.ಎಂ.ರೇವಣ್ಣ ಸೇರಿದಂತೆ ಹಲವರಿಗೆ ಕರೊನಾ ಸೋಂಕು ತಗುಲಿದೆ.