Select Your Language

Notifications

webdunia
webdunia
webdunia
webdunia

ಮಕ್ಕಳಿಗೆ ಕೊರೊನಾ ಲಸಿಕೆ

ಮಕ್ಕಳಿಗೆ ಕೊರೊನಾ ಲಸಿಕೆ
ಬೆಂಗಳೂರು , ಗುರುವಾರ, 13 ಜನವರಿ 2022 (15:18 IST)
ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದ್ದು, ಮೂರನೇ ಅಲೆ ಶುರುವಾಗಿದೆ ಎನ್ನಲಾಗುತ್ತಿದೆ. ಈ ಹಿಂದೆಯೇ ಇದು ಮಕ್ಕಳಿಗೆ ಹೆಚ್ಚು ಮಾರಕವಾಗಲಿದೆ ಎಂದು ಊಹಿಸಲಾಗಿತ್ತು. ಈಗ ಮಕ್ಕಳಲ್ಲಿ ಶ್ವಾಸಕೋಶದ ತೊಂದರೆ ಕಾಣಿಸುತ್ತಿರುವುದು ತೀವ್ರ ಆತಂಕಕ್ಕೆ ಕಾರಣವಾಗುತ್ತಿದೆ.
ವರ್ಷದೊಳಗಿನ ಮಕ್ಕಳಲ್ಲಿ ಶ್ವಾಸಕೋಶದ ಸೋಂಕು ಹೆಚ್ಚಾಗಿ ಕಂಡು ಬರುತ್ತಿದೆ. ಇದು ಜ್ವರ, ಕೆಮ್ಮು, ಶೀತ, ನೆಗಡಿಯ ರೂಪದಲ್ಲಿ ಕಂಡು ಬರುತ್ತದೆ. ಈ ಖಾಯಿಲೆ ಹೆಚ್ಚಾದರೆ ವೈರಲ್ ನ್ಯೂಮೋನಿಯಾ ಆಗಿ ಪರಿವರ್ತನೆ ಹೊಂದುವ ಸಾಧ್ಯತೆ ಹೆಚ್ಚಾಗಿರುತ್ತದೆ.
 
ಸದ್ಯ ಬೆಂಗಳೂರು ನಗರದಲ್ಲಿನ ಆಸ್ಪತ್ರೆಯಲ್ಲಿನ ಕೆಲ ಮಕ್ಕಳು ಈ ಆರ್.ವಿ.ಎಸ್. ಸೋಂಕಿಗೆ ತುತ್ತಾಗುತ್ತಿದ್ದಾರೆ. ಆದರೆ, ಆರ್.ವಿ.ಎಸ್. ಕಾಣಿಸಿಕೊಂಡ ಮಕ್ಕಳನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಿದಾಗ ವರದಿ ನೆಗೆಟಿವ್ ಬಂದಿವೆ. ಹೀಗಿದ್ದರೂ ಈ ಸಂದರ್ಭದಲ್ಲಿ ಪಾಲಕರು ನಿರ್ಲಕ್ಷ್ಯ ವಹಿಸುವುದು ಸೂಕ್ತವಲ್ಲ. ಆರ್.ವಿ.ಎಸ್. ನಲ್ಲಿ ಉಸಿರಾಟದ ಸಮಸ್ಯೆ ಕಂಡು ಬಂದರೆ ಮಕ್ಕಳ ಜೀವಕ್ಕೆ ಅಪಾಯ ಹೆಚ್ಚಾಗಿರುತ್ತದೆ ಎಂದು ವೈದ್ಯರು ಎಚ್ಚರಿಸುತ್ತಿದ್ದಾರೆ.
 
ಈ ಸಮಯದಲ್ಲಿ ಆರ್.ವಿ.ಎಸ್. ಹೆಚ್ಚಾಗಿ ಮಕ್ಕಳನ್ನು ಕಾಡುತ್ತಿರುತ್ತದೆ. ಹೀಗಾಗಿ ಮಕ್ಕಳನ್ನು ಹೆಚ್ಚು ಜನರು ಇರುವ ಪ್ರದೇಶಗಳಿಗೆ ಕರೆದುಕೊಂಡು ಹೋಗಬಾರದು. ಕೊರೊನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದರೊಂದಿಗೆ ಈ ಸಂದರ್ಭದಲ್ಲಿ ಮಕ್ಕಳ ಆರೈಕೆ ಅತಿ ಅವಶ್ಯವಾಗಿದೆ ಎಂದು ವೈದ್ಯರು ಹೇಳುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಮ್ಮ ಮೆಟ್ರೋ ಕೊರೊನಾ ಸ್ಫೋಟ