ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಗೆ ಕೊರೊನಾ ಸೋಂಕು . ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನನಗೆ ಇಂದು ಮತ್ತೆ ಕೊರೊನಾ ಪಾಸಿಟಿವ್ ವರದಿಯಾಗಿದೆ. ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡು ಮನೆಯಲ್ಲೇ ಐಸೋಲೇಷನ್‍ಗೆ ಒಳಗಾಗಿದ್ದೇನೆ. ಯಾರೆಲ್ಲ ನನ್ನ ಸಂಪರ್ಕ ಮಾಡಿದ್ದೀರಿ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಿ ಎಂದಿದ್ದಾರೆ. ಕಳೆದ ತಿಂಗಳು ಪಿಯಾಂಕಾ ಗಾಂಧಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಆ ಬಳಿಕ ಗುಣಮುಖರಾಗಿದ್ದರು. ಇದೀಗ ಮತ್ತೆ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಎರಡು ತಿಂಗಳ ಅಂತರದಲ್ಲಿ ಎರಡನೇ ಬಾರಿ ಕೊರೊನಾ ಪಾಸಿಟಿವ್ ವರದಿಯಾಗಿದೆ.