ಬೆಂಗಳೂರು : ಕೊರೊನ ಸೋಂಕು ಭೀತಿಯ ಹಿನ್ನಲೆಯಲ್ಲಿ 7,8,9ನೇ ತರಗತಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಿರುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ರಾಜ್ಯಾದ್ಯಂತ ಕೊರೊನಾ ವೈರಸ್ ಹರಡುತ್ತಿರುವ ಹಿನ್ನಲೆಯಲ್ಲಿ ಈಗಾಗಲೇ ರಾಜ್ಯ ಸರ್ಕಾರ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಅಷ್ಟೇ ಅಲ್ಲದೇ 6ನೇ ತರಗತಿಯವರೆಗೆ ಪರೀಕ್ಷೆ ರದ್ದು ಮಾಡಲಾಗಿದ್ದು, ಇದೀಗ 7,8,9ನೇ ತರಗತಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ.
ಈ ಬಗ್ಗೆ ಮಾಡಿರುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದು, 7,8,9ನೇ ತರಗತಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದ್ದು, ಮಾರ್ಚ್ 31ರ ನಂತರ ಹೊಸ ದಿನಾಂಕ ನಿಗದಿ ಮಾಡುವುದಾಗಿ ತಿಳಿಸಿದ್ದಾರೆ.