Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಕೋರೊನಾ ಕೇಕೆ

ಕೊರೊನಾ
ಬೆಂಗಳೂರು-ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 279 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಮೂವರು ಸೋಂಕಿತರು ಮೃತಪಟ್ಟಿದ್ದಾರೆ. ಮೃತ ಪ್ರಕರಣಗಳ ಪೈಕಿ ಮೈಸೂರು ಜಿಲ್ಲೆಯಲ್ಲೇ ಎರಡು ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರಿನಲ್ಲಿ ಒಂದು ಸಾವು ಪ್ರಕರಣ ದಾಖಲಾಗಿದೆ. ಬೆಂಗಳೂರಿನಲ್ಲಿ ನಿನ್ನೆ 134 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 6,359 ಜನರನ್ನು ಕೊವೀಡ್ ಟೆಸ್ಟ್​ಗೆ ಒಳಪಡಿಸಲಾಗಿದ್ದು, 279 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ನಿನ್ನೆ 235 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಸದ್ಯ ರಾಜ್ಯದಲ್ಲಿ 1,222 ಸಕ್ರಿಯ ಕೊರೊನಾ ಸೋಂಕು ಪ್ರಕರಣಗಳಿವೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 4.38 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯಾದ್ಯಂತ 30ಕ್ಕೂ ಹೆಚ್ಚು ಕಡೆ ಲೋಕಾಯುಕ್ತ ದಾಳಿ