Select Your Language

Notifications

webdunia
webdunia
webdunia
webdunia

ಶಾಲಾ ಕಾಲೇಜುಗಳಲಿ ಕೋವಿಡ್ ಹೆಚ್ಚಳ

ಶಾಲಾ ಕಾಲೇಜುಗಳಲಿ ಕೋವಿಡ್ ಹೆಚ್ಚಳ
ಬೆಂಗಳೂರು , ಸೋಮವಾರ, 13 ಡಿಸೆಂಬರ್ 2021 (17:39 IST)
ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಕೋವಿಡ್‌ ಪ್ರಕರಣಗಳು ದಿನೇ ದಿನೆ ಹೆಚ್ಚುತ್ತಿದ್ದು, ಭಾನುವಾರ ಮತ್ತೆ ಮೂರು ಶಾಲೆಗಳಲ್ಲಿ 32 ವಿದ್ಯಾರ್ಥಿಗಳಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಮೂಲಕ ಕಳೆದ ಕಳೆದ ಹದಿನೆಂಟು ದಿನಗಳಲ್ಲಿ ಶಾಲಾ-ಕಾಲೇಜುಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 603 ತಲುಪಿದೆ.ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಆಲೂರು ಸಿದ್ದಾಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 19, ಮಡಿಕೇರಿಯ ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯದ 9 ಹಾಗೂ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ದೇರಹಳ್ಳಿಯ ನವೋದಯ ಶಾಲೆಯ ನಾಲ್ವರು ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಇದರಲ್ಲಿ ಮಡಿಕೇರಿಯ ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯದಲ್ಲಿ ಕಳೆದ ವಾರವಷ್ಟೇ 11 ವಿದ್ಯಾರ್ಥಿಗಳು ಪಾಸಿಟಿವ್‌ ಆಗಿದ್ದರು. ಈ ಮೂಲಕ ಶಾಲೆಯಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ 20ಕ್ಕೇರಿದೆ.ಕೊರೋನಾ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಶಾಲೆಗಳನ್ನು ಸೀಲ್ಡೌನ್‌ ಮಾಡಲಾಗಿದೆ. ಎಲ್ಲಾ ಮಕ್ಕಳ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ರಾಜ್ಯಾದ್ಯಂತ ವಸತಿ ಶಾಲೆಗಳು ಹಾಗೂ ನರ್ಸಿಂಗ್‌ ಕಾಲೇಜುಗಳಲ್ಲೇ ಹೆಚ್ಚಾಗಿ ಕೊರೋನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವುದು ಆತಂಕ ಮೂಡಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಿಸ್ ಯೂನಿವರ್ಸಿ ಮತ್ತೆ ಭಾರತಕ್ಕೆ