Select Your Language

Notifications

webdunia
webdunia
webdunia
webdunia

4 ತಬ್ಲಿಘಿಗಳಲ್ಲಿ ಕೊರೊನಾ ಸೋಂಕು : ರಾಜ್ಯದಲ್ಲಿ ಆತಂಕ

webdunia
ಬೆಳಗಾವಿ , ಭಾನುವಾರ, 5 ಏಪ್ರಿಲ್ 2020 (21:21 IST)
ರಾಜ್ಯದಲ್ಲಿ ಮತ್ತೆ ನಾಲ್ವರು ತಬ್ಲಿಘಿಗಳಲ್ಲಿ ಕೊರೊನಾ ವೈರಸ್ ಲಕ್ಷಣಗಳು ದೃಢಪಟ್ಟಿದೆ.

ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ನಾಲ್ಕು ಜನರಿಗೆ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದ ಬೆಳಗಾವಿ ಜಿಲ್ಲೆಯಲ್ಲಿ ಸೋಂಕು ತಗುಲಿದವರ ಸಂಖ್ಯೆ ಏಳಕ್ಕೇರಿದೆ.

ಒಂದೇ ದಿನ ನಾಲ್ವರಿಗೆ ಕೋವಿಡ್-19 ಸೋಂಕು ತಗುಲಿರುವುದು ತೀವ್ರ ಆತಂಕ ಉಂಟು ಮಾಡಿದೆ. ಕೋವಿಡ್-19 ಸೋಂಕು ತಗುಲಿದವರು ನಾಲ್ವರೂ ರಾಯಬಾಗ ತಾಲೂಕಿಗೆ ಸೇರಿದವರಾಗಿದ್ದಾರೆ. ಇವರೆಲ್ಲರೂ ದೆಹಲಿ ನಿಜಾಮುದ್ದೀನ್ ಮರ್ಕಜ್ ನಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದರು.

ಕೋವಿಡ್ 19 ಸೋಂಕು ದೃಢಪಟ್ಟವರಲ್ಲಿ ಇಬ್ಬರು ಮಹಿಳೆಯರು ಸೇರಿದ್ದಾರೆ ಎಂದು ರಾಜ್ಯ ಸರಕಾರ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.

ನಾಲ್ವರಿಗೆ ಕೋವಿಡ್-19 ಸೋಂಕು ತಗುಲಿದ ಕಾರಣ ರಾಯಬಾಗ ತಾಲೂಕಿನಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಮಾಜಿ ಪ್ರಧಾನಿ ದೇವೇಗೌಡರಿಗೆ ಪ್ರಧಾನಿ ಮೋದಿ ದೂರವಾಣಿ ಕರೆ