Publish Date: Mon, 18 Jul 2022 (18:55 IST)
Updated Date: Mon, 18 Jul 2022 (18:59 IST)
ಭಾರತದಲ್ಲಿ 16,935 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 51 ಮಂದಿ ಸಾವನ್ನಪ್ಪಿದ್ದಾರೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೊರೋನಾ ನಾಲ್ಕನೇ ಅಲೆಯ ಭೀತಿ ಎದುರಾಗಿದೆ. ಇವರಲ್ಲಿ ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್ಗಳನ್ನು ಪಡೆದಿದ್ದಾರೆ. ಸಕ್ರಿಯ ಪ್ರಕರಣಗಳು 14 ಸಾವಿರ ಇದೆ. ಕೊವಿಡ್ನಿಂದ ಸಾವನ್ನಪ್ಪಿರುವವರ ಸಂಖ್ಯೆ 5 ಲಕ್ಷಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ16 ಸಾವಿರ ಮಂದಿ ಗುಣಮುಖರಾಗಿರುವುದರೊಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ ಏರಿಕೆ ಕಂಡಿದೆ. ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್, ಕೋವಿಶೀಲ್ಡ್ ಕೊರೋನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್ಗೆ ಮೊದಲು ಲಸಿಕೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷಮೇಲ್ಪಟ್ಟ ಎಲ್ಲಾ ನಾಗರಿ ಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18 ರಿಂದ 45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.