Select Your Language

Notifications

webdunia
webdunia
webdunia
Wednesday, 9 April 2025
webdunia

ಕೊರೊನಾ ಭೀತಿ ಹೆಚ್ಚಳ

Cm
ಬೆಂಗಳೂರು , ಶನಿವಾರ, 27 ನವೆಂಬರ್ 2021 (15:22 IST)

ಕೋವಿಡ್ ನಿಯಂತ್ರಣ, ಲಸಿಕೆ ವಿಚಾರ ಹಾಗೂ ಹೊಸ ತಳಿಯ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ಸಂಜೆ ಸಭೆ ನಡೆಸಲಿದ್ದಾರೆ.

ದಕ್ಷಿಣ ಆಫ್ರಿಕಾದಲ್ಲಿ ಕೊರೊನಾ ವೈರಸ್ ನ ಹೊಸ ರೂಪಾಂತರಿ ತಳಿಗೆ 'ಒಮಿಕ್ರಾನ್ ಅಥವಾ ಬಿ.1.1.529' ಹೆಸರಿಟ್ಟಿರುವ ವಿಶ್ವ ಆರೋಗ್ಯ ಸಂಸ್ಥೆ, ಈ ರೂಪಾಂತರಿ ತಳಿ ಕಳವಳಕಾರಿ ಎಂದು ಘೋಷಿಸಿದೆ.

ಇಂದು ಸಂಜೆ 4 ಕ್ಕೆ ನಿವಾಸದಲ್ಲಿ ಅಭಿವೃದ್ಧಿ ಆಯುಕ್ತರು, ಬಿಬಿಎಂಪಿ ಮುಖ್ಯ ಆಯುಕ್ತರು, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ, ವಿಪತ್ತು ನಿರ್ವಹಣಾ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ಜೊತೆ ಸಭೆ ನಡೆಸಲಿದ್ದಾರೆ. ಜೊತೆಗೆ ಧಾರವಾಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, ಮೈಸೂರು, ಬೆಂಗಳೂರು ನಗರ ಡಿಸಿಗಳು ವೀಡಿಯೋ ಕಾನ್ಫರೆನ್ಸ್ ಮೂಲಕ ಪಾಲ್ಗೊಳ್ಳಲು ಸೂಚನೆ ನೀಡಿದ್ದಾರೆ ಮತ್ತು ತಾಂತ್ರಿಕ ಸಲಹಾ ಸಮಿತಿ ಸದಸ್ಯರಿಗೂ ಕೂಡಾ ಸಭೆಗೆ ಆಹ್ವಾನಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕದಲ್ಲಿ ಮತ್ತೆ ಲಾಕ್ ಡೌನ್ ಭೀತಿ