Select Your Language

Notifications

webdunia
webdunia
webdunia
webdunia

ಕೊರೋನಾ ಭೀತಿ: ಮಕರ ಸಂಕ್ರಾಂತಿಯಂದು ಗಂಗಾ ನದಿಯಲ್ಲಿ ಪವಿತ್ರ ಸ್ನಾನಕ್ಕೆ ಅವಕಾಶ ಇಲ್ಲ

ಕೊರೋನಾ ಭೀತಿ: ಮಕರ ಸಂಕ್ರಾಂತಿಯಂದು ಗಂಗಾ ನದಿಯಲ್ಲಿ ಪವಿತ್ರ ಸ್ನಾನಕ್ಕೆ ಅವಕಾಶ ಇಲ್ಲ
bangalore , ಬುಧವಾರ, 12 ಜನವರಿ 2022 (18:49 IST)
ದೇಶಾದ್ಯಂತ ಅತಿ ವೇಗದಲ್ಲಿ ಕೊರೋನಾ ಹಾಗೂ ಒಮಿಕ್ರಾನ್ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಹರಿದ್ವಾರದ ಗಂಗಾ ನದಿಯಲ್ಲಿ ಮಕರ ಸಂಕ್ರಾಂತಿಯಂದು ಭಕ್ತರ ಪವಿತ್ರ ಸ್ನಾನಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದೆ.
ಇದೇ 14 ರಂದು ಮಕರ ಸಂಕ್ರಾಂತಿ ಆಚರಣೆಯ ಭಾಗವಾಗಿ ಹೆಚ್ಚು ಮಂದಿ ಗಂಗಾ ನದಿಯಲ್ಲಿ ಸ್ನಾನಕ್ಕೆಂದು ತೆರಳುತ್ತಾರೆ. ಇದರಿಂದ ಸೋಂಕು ಹರಡುವ ಸಾಧ್ಯತೆ ಹೆಚ್ಚಿದ್ದು, ಈ ಬಾರಿ ಸ್ನಾನಕ್ಕೆ ಅವಕಾಶ ಇಲ್ಲ ಎಂದು ಜಿಲ್ಲಾಡಳಿತ ಹೇಳಿದೆ.
ಉತ್ತರಾಖಂಡ ಸರ್ಕಾರವು ಮಕರ ಸಂಕ್ರಾಂತಿಯಂದು ಕಟ್ಟುನಿಟ್ಟಿನ ನಿರ್ಬಂಧಗಳನ್ನು ಜಾರಿಗೊಳಿಸಿದೆ. ಹರ್ ಕಿ ಪೌರಿ ಪ್ರದೇಶದಲ್ಲಿಯೂ ಜನ ಪೂಜೆಗೆಂದು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಈ ಕಾರಣದಿಂದ ಅಲ್ಲಿ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಜನವರಿ 14 ರ ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

5ರಿಂದ 9ನೇ ತರಗತಿ ವರೆಗಿನ ಮಕ್ಕಳಿಗೆ “ಸಂವೇದ- ಇ ಕಲಿಕಾ’ ಕಾರ್ಯಕ್ರಮ