Publish Date: Wed, 26 Jan 2022 (16:57 IST)
Updated Date: Wed, 26 Jan 2022 (18:00 IST)
ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ಅವರಿಗೆ ಕೊರೋನಾ ಸೋಂಕು ಧೃಡಪಟ್ಟಿದೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ನನಗೆ ಕೊರೋನಾ ಸೌಮ್ಯ ಲಕ್ಷಣಗಳು ಕಂಡು ಬಂದ ಹಿನ್ನೆಲೆ, ಕೊರೋನಾ ಪರೀಕ್ಷೆಗೆ ಒಳಗಾಗಿದ್ದೆ. ಇದೀಗ ಪರೀಕ್ಷೆ ವರದಿ ಬಂದಿದ್ದು, ನನಗೆ ಕೋವಿಡ್ ಸೋಂಕು ಧೃಡಪಟ್ಟಿರುವುದು ಪತ್ತೆಯಾಗಿದೆ.
ಹೀಗಾಗಿ ಕಳೆದ ಕೆಲ ದಿನಗಳಿಂದ ನನ್ನ ಸಂಪರ್ಕದಲ್ಲಿದ್ದಂತ ಎಲ್ಲರೂ ಮುಂಜಾಗ್ರತೆ ವಹಿಸಿ, ಕೊರೋನಾ ಲಕ್ಷಣಗಳಿದ್ದರೇ ಪರೀಕ್ಷೆಗೆ ಒಳಪಡುವಂತೆ ಮನವಿ ಮಾಡಿದ್ದಾರೆ.