Select Your Language

Notifications

webdunia
webdunia
webdunia
Monday, 14 April 2025
webdunia

ಗೃಹ ಸಚಿವರನ್ನೂ ಬಿಡದ ವೈರಸ್

ಗೃಹ ಸಚಿವ
ಬೆಂಗಳೂರು , ಬುಧವಾರ, 16 ಸೆಪ್ಟಂಬರ್ 2020 (17:43 IST)
ಗೃಹ ಸಚಿವ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಕೋವಿಡ್ ದೃಢಪಟ್ಟಿದೆ.

ಗೃಹ ಸಚಿವ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಕೋವಿಡ್ ದೃಢ ಸೋಂಕು ದೃಢ ಪಟ್ಟಿದ್ದು, ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲದ ಕಾರಣ ಮನೆಯಲ್ಲಿಯೇ ಪ್ರತ್ಯೇಕವಾಗಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವುದಾಗಿ ಸಚಿವರು ತಮ್ಮ ಟ್ವಿಟರ್ ನಲ್ಲಿ ತಿಳಿಸಿದ್ದಾರೆ.

ಗೃಹ ಸಚಿವರ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸಗಾರನೊಬ್ಬನಿಗೆ ಕೋವಿಡ್-19 ಪರೀಕ್ಷೆಯಲ್ಲಿ ಸೊಂಕು ದೃಢಪಟ್ಟಿತ್ತು. ಈ ಹಿನ್ನಲೆಯಲ್ಲಿ ಸಚಿವರು ಪರೀಕ್ಷೆಗೆ ಒಳಪಟ್ಟಿದ್ದು, ಸೋಂಕು ದೃಢಪಟ್ಟಿದೆ ಎಂದು ಹೇಳಿದ್ದಾರೆ.

ಸಚಿವರ ನೇರ ಸಂಪರ್ಕಕ್ಕೆ ಬಂದಿರುವವರು ಕೂಡಲೇ ಕೋವಿಡ್ ಪರೀಕ್ಷೆಗೆ ಒಳಪಡುವಂತೆ ಹಾಗೂ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಬೇರೊಬ್ಬನ ಪತ್ನಿಯ ಜೊತೆ ಚಾಟ್ ಮಾಡುತ್ತಿದ್ದ ಹುಡುಗನ ಕಥೆ ಏನಾಯ್ತು?