Publish Date: Tue, 18 Aug 2020 (17:29 IST)
Updated Date: Tue, 18 Aug 2020 (17:31 IST)
ರಾಜ್ಯದ ಶಾಸಕಿಯೊಬ್ಬರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕ್ಷೇತ್ರದ ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.
ನನ್ನ ಆಪ್ತವಲಯದ ಎಲ್ಲರೂ ಪರೀಕ್ಷೆಗೆ ಒಳಗಾಗಿದ್ದು ಹಾಗೂ ನನ್ನ ಸಂಪರ್ಕದಲ್ಲಿರುವ ಎಲ್ಲರೂ ಮುನ್ನೆಚ್ಚರಿಕೆ ಕ್ರಮ ವಹಿಸಲು ಕೋರುತ್ತೇನೆ ಎಂದು ಶಾಸಕಿ ತಿಳಿಸಿದ್ದಾರೆ.
ಶಾಸಕಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಹೋಂ ಐಸೋಲೇಷನ್ ಗೆ ಒಳಗಾಗಿದ್ದಾರೆ ಎನ್ನಲಾಗಿದೆ.