Publish Date: Sun, 24 May 2020 (18:52 IST)
Updated Date: Sun, 24 May 2020 (18:54 IST)
ಕೊರೊನಾ ವಾರಿಯರ್ಸ್ ಗಳಂತೆ ಕೆಲಸ ನಿರ್ವಹಿಸುತ್ತಿರುವ ಪೊಲೀಸರಿಗೂ ಕೊರೊನಾ ವೈರಸ್ ಕಾಟ ಹೆಚ್ಚಾಗಿ ಕಾಡತೊಡಗಿದೆ.
ಕಳೆದ ಎರಡು ದಿನಗಳಲ್ಲಿ ಮಹಾರಾಷ್ಟ್ರದಲ್ಲಿ 90 ಕ್ಕೂ ಅಧಿಕ ಪೊಲೀಸರಿಗೆ ಕೊರೊನಾ ಪಾಸಿಟಿವ್ ದೃಢವಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.
ಈವರೆಗೆ ಒಟ್ಟು 1758 ಪೊಲೀಸ್ ಸೇರಿದಂತೆ ವಿವಿಧ ಭದ್ರತಾ ಪಡೆಗಳ ಸಿಬ್ಬಂದಿಗೆ ಕೊರೊನಾ ತಗುಲಿದ್ದು, 18 ಜನರು ಸಾವನ್ನಪ್ಪಿದ್ದಾರೆ.