Select Your Language

Notifications

webdunia
webdunia
webdunia
webdunia

ಪೊಲೀಸ್ ಗೆ ಕೊರೊನಾ ಪಾಸಿಟಿವ್ : ಠಾಣೆ ಸೀಲ್ ಡೌನ್

ಪೊಲೀಸ್ ಗೆ ಕೊರೊನಾ ಪಾಸಿಟಿವ್ : ಠಾಣೆ ಸೀಲ್ ಡೌನ್
ಬಳ್ಳಾರಿ , ಸೋಮವಾರ, 1 ಜೂನ್ 2020 (15:40 IST)
ಮುಖ್ಯಪೇದೆಗೆ ಕೊರೊನಾ ಸೋಂಕು‌ ಧೃಡ ಪಟ್ಟಿದ್ದರಿಂದ ಇಡೀ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.

ಬಳ್ಳಾರಿ ಜಿಲ್ಲೆಯ ಕೊಟ್ಟೂರು ಪಟ್ಟಣದ ಪೊಲೀಸ್ ಠಾಣೆಯ ಮುಖ್ಯಪೇದೆಗೆ ಕೊರೊನಾ ಸೋಂಕು‌ ಧೃಡ ಪಟ್ಟಿದ್ದರಿಂದ ಇಡೀ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.

ಇದರಿಂದ ಠಾಣೆಯ ವ್ಯಾಪ್ತಿಯ ಜನರು ದೂರು ಸೇರಿದಂತೆ ಠಾಣೆಗೆ ಸಂಬಂಧಿಸಿದಂತೆ ವಿಚಾರಗಳಿಗೆ ಕಾನಾಹೊಸಳ್ಳಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ತಿಳಿಸಿದ್ದಾರೆ.

ಪಿಎಸ್ ಐ ಸೇರಿದಂತೆ 42 ಸಿಬ್ಬಂದಿಗಳಿಗೆ ಸಾಂಸ್ಥಿಕ ಕ್ವಾರಂಟೈನ್ ನಲ್ಲಿಡಲಾಗಿದೆ. ಕೊಟ್ಟೂರು ಪೊಲೀಸ್ ವಸತಿ ಗೃಹಗಳ ಪ್ರದೇಶವನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲಾಗಿದೆ.  

ಕೊಟ್ಟೂರು ಪೊಲೀಸ್ ಠಾಣೆಗೆ ಸಂಬಂಧಿಸಿದ ಕೆಲಸಗಳು ಮತ್ತು ದೂರುಗಳಿಗೆ ಕಾನಾಹೊಸಳ್ಳಿ ಪೊಲೀಸ್ ಠಾಣೆ ಪಿಎಸ್ ಐ ನಾಗರಾಜ್ 9480803060, ಸಿಪಿಐ ರವೀಂದ್ರ ಕುರುಬಗಟ್ಟಿ 9480803045 ಅವರನ್ನು ಸಂಪರ್ಕಿಸಬಹುದು.



Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯ ಸರ್ಕಾರವನ್ನು ಹೊಗಳಿದ ಪ್ರಧಾನಿ ಮೋದಿ