Publish Date: Sat, 08 Aug 2020 (22:47 IST)
Updated Date: Sat, 08 Aug 2020 (22:49 IST)
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯೊಬ್ಬರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ.
ಎಸ್ ಪಿ ಯವರ ಪ್ರಾಥಮಿಕ ಸಂಪರ್ಕದಲ್ಲಿ ಬಂದ ಜಿಲ್ಲಾಧಿಕಾರಿ ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿ 110 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದೇ ವೇಳೆ ಗುಣಮುಖರಾದ 206 ಜನರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಎಸ್ಪಿ ಅವರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದು ಮನೆಯಿಂದಲೇ ಕೆಲಸ ಮಾಡುತ್ತಿದ್ದಾರೆ.
ದಾವಣಗೆರೆಯಲ್ಲಿ 74, ಹರಿಹರ 6, ಜಗಳೂರು 1, ಚನ್ನಗಿರಿ 3, ಹೊನ್ನಾಳಿ 25, ಅನ್ಯ ಜಿಲ್ಲೆ 1 ಸೇರಿದಂತೆ 110 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3146 ಕ್ಕೆ ಏರಿದ್ದು, 2048 ಗುಣಮುಖರಾಗಿದ್ದಾರೆ. 78 ಜನರು ಸಾವಿಗೀಡಾಗಿದ್ದು, 1020 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರಿದಿದೆ.