Publish Date: Fri, 03 Jun 2022 (07:33 IST)
Updated Date: Fri, 03 Jun 2022 (08:35 IST)
ಬೆಂಗಳೂರು : ರಾಜ್ಯ ಆರೋಗ್ಯ ಸಚಿವ ಡಾ.ಕೆ ಸುಧಾಕರ್‌ಗೆ ಕೊರೊನಾ ಪಾಸಿಟಿವ್ ವರದಿಯಾಗಿದೆ.
ಈ ಬಗ್ಗೆ ಟ್ವಿಟ್ಟರ್ನಲ್ಲಿ ಟ್ವೀಟ್ ಮಾಡಿರುವ ಅವರು, ಮೂರು ಅಲೆಗಳ ಸಂದರ್ಭದಲ್ಲೂ ಕೋವಿಡ್ ಸೋಂಕಿನಿಂದ ಪಾರಾಗಿದ್ದ ನಾನು ಈಗ ಸೋಂಕಿಗೆ ತುತ್ತಾಗಿದ್ದೇನೆ. ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಆಗಿರುವುದು ಪತ್ತೆಯಾಗಿದೆ.
ಕೆಲ ರೋಗ ಲಕ್ಷಣಗಳು ಕಾಣಿಸಿಕೊಂಡಿದ್ದು ಹೋಮ್ ಐಸೋಲೇಷನ್ನಲ್ಲಿ ಇದ್ದುಕೊಂಡೇ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಪೋಸ್ಟ್ ಮಾಡಿದ್ದಾರೆ.
ಕೆಲದಿನಗಳ ಹಿಂದೆ ಸುಧಾಕರ್ ಕುಟುಂಬದ ಜೊತೆ ವಿದೇಶ ಪ್ರವಾಸ ಮುಗಿಸಿ ವಾಪಸ್ ಆಗಿದ್ದರು. 10ಕ್ಕೂ ಹೆಚ್ಚು ದಿನಗಳ ಕಾಲ ವಿದೇಶಿ ಪ್ರವಾಸದಲ್ಲಿದ್ದ ಸಚಿವರಿಗೆ ವಿದೇಶದಿಂದಲೇ ಸೋಂಕು ಹಬ್ಬಿರುವ ಅನುಮಾನ ಕಾಡುತ್ತಿದೆ.
Ramya kosira
Publish Date: Fri, 03 Jun 2022 (07:33 IST)
Updated Date: Fri, 03 Jun 2022 (08:35 IST)