ಡೆಡ್ಲಿ ಕೊರೊನಾ ಅಟ್ಟಹಾಸ ರಾಜ್ಯದಲ್ಲಿ ಮುಂದುವರಿದಿರುವಂತೆ ಈ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಶತಕಕ್ಕೆ ತಲುಪಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ 6 ಹೊಸ ಕೊರೊನಾ ಸೋಂಕು ಕೇಸ್ ಪತ್ತೆಯಾಗುವುದರೊಂದಿಗೆ ಒಟ್ಟು ಜಿಲ್ಲೆಯ ಇದುವರೆಗಿನ ಸೋಂಕಿತರ ಸಂಖ್ಯೆ 100 ಕ್ಕೆ ಏರಿಕೆಯಾದಂತಾಗಿದೆ.
ಚಿಕ್ಕಮಗಳೂರು ತಾಲ್ಲೂಕಿನಲ್ಲಿ 5, ಮೂಡಿಗೆರೆ ತಾಲ್ಲೂಕಿನಲ್ಲಿ 1 ಹೊಸ ಸೋಂಕು ಪ್ರಕರಣ ಪತ್ತೆಯಾಗಿದೆ.
48 ಸಕ್ರಿಯ ಪ್ರಕರಣಗಳು ಇದ್ದು, ಸೋಂಕು ಕಾಣಿಸಿಕೊಂಡವರನ್ನು ಕೋವಿಡ್ ನಿಗದಿತ ಆಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆ ನೀಡಲಾಗುತ್ತಿದೆ.