Select Your Language

Notifications

webdunia
webdunia
webdunia
webdunia

ಕೊರೊನಾ ಶಂಕೆ : 5 ವರದಿಗಳೂ ನೆಗಟಿವ್ ; ನಿಟ್ಟುಸಿರು ಬಿಟ್ಟ ಜನತೆ

ಕೊರೊನಾ ಶಂಕೆ : 5 ವರದಿಗಳೂ ನೆಗಟಿವ್ ; ನಿಟ್ಟುಸಿರು ಬಿಟ್ಟ ಜನತೆ
ಬೆಳಗಾವಿ , ಮಂಗಳವಾರ, 24 ಮಾರ್ಚ್ 2020 (21:39 IST)
ಕೋವಿಡ್-19 ಸೋಂಕಿಗೆ ಸಂಬಂಧಿಸಿದಂತೆ ಪ್ರಯೋಗಾಲಯಕ್ಕೆ ಕಳಿಸಿದ್ದ 5 ವರದಿಗಳೂ ನೆಗೆಟಿವ್ ಅಂತ ಬಂದಿವೆ. ಇದರಿಂದಾಗಿ ಜನರು ಕೊಂಚ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

ಬೆಳಗಾವಿ ಜಿಲ್ಲೆಯಿಂದ ಇದುವರೆಗೆ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದ ಎಲ್ಲ ಐದೂ ವರದಿಗಳು ನೆಗೆಟಿವ್ ಬಂದಿರುತ್ತವೆ ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ.

ಒಟ್ಟಾರೆ ಐದು ಜನರ ಗಂಟಲು ದ್ರವಗಳ ಮಾದರಿಯನ್ನು ಪರೀಕ್ಷೆಗೆ ಕಳಿಸಲಾಗಿತ್ತು.

ಇದೀಗ ಪ್ರಯೋಗಾಲಯದಿಂದ ಲಭಿಸಿರುವ ವರದಿ ಪ್ರಕಾರ ಎಲ್ಲ ಐದೂ ಮಾದರಿಗಳ ಫಲಿತಾಂಶ ನೆಗೆಟಿವ್ ಬಂದಿರುತ್ತದೆ.

ಎರಡು ಮಾದರಿ ಬೆಂಗಳೂರು ಹಾಗೂ ಮೂರು ಮಾದರಿಗಳನ್ನು ಶಿವಮೊಗ್ಗ ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು ಎಂದು ಅವರು ತಿಳಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾಗೆ 15 ಸಾವಿರ ಕೋಟಿ ರೂಪಾಯಿ ಪ್ಯಾಕೇಜ್ ಘೋಷಿಸಿದ ಮೋದಿ