Publish Date: Thu, 09 Apr 2020 (20:32 IST)
Updated Date: Thu, 09 Apr 2020 (20:33 IST)
ರಾಜ್ಯದ ಈ ಜಿಲ್ಲೆಯಲ್ಲಿ ಮತ್ತೆ 30 ಜನರಲ್ಲಿ ಕೊರೊನಾ ವೈರಸ್ ಇರುವ ಶಂಕೆ ವ್ಯಕ್ತವಾಗಿದೆ.
ಉಡುಪಿ ಜಿಲ್ಲೆಯಲ್ಲಿ ಹೊಸದಾಗಿ 30 ಮಂದಿ ಕೊರೊನಾ ಶಂಕಿತರನ್ನು ಗುರುತಿಸಲಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಿಹೆಚ್‍ಓ ಡಾ ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.
30 ಮಂದಿ ಶಂಕಿತರ ಪೈಕಿ 24 ಮಂದಿ ಸೋಂಕಿತರ ಸಂಪರ್ಕದಲ್ಲಿದ್ದವರಾಗಿದ್ದು, ಇಬ್ಬರಲ್ಲಿ ಕೊರೊನಾ ಲಕ್ಷಣ ಕಾಣಿಸಿಕೊಂಡಿದೆ. ಉಳಿದ ನಾಲ್ಕು ಮಂದಿಯಲ್ಲಿ ಉಸಿರಾಟದ ಸಮಸ್ಯೆ ಕಂಡು ಬಂದಿದೆ ಎಂದು ಮಾಹಿತಿ ನೀಡಿದ್ದಾರೆ. 11 ಮಂದಿಯ ವೈದ್ಯಕೀಯ ವರದಿ ಬಂದಿದ್ದು, ಎಲ್ಲರಲ್ಲೂ ನೆಗಟೀವ್ ಬಂದಿದೆ.
33 ಮಂದಿಯ ವರದಿ ಬರಲು ಬಾಕಿ ಇದೆ. ಐಸೋಲೇಶನ್ ವಾರ್ಡ ನಿಂದ 4 ಮಂದಿ ಬಿಡುಗಡೆ ಹೊಂದಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ಒಟ್ಟು 3 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದ್ದಾರೆ.