Publish Date: Fri, 06 Mar 2020 (13:51 IST)
Updated Date: Fri, 06 Mar 2020 (13:52 IST)
ಗಣಿ ನಾಡು ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ವೈರಾಸ್ ನ ಶಂಕಿತ 2 ಪ್ರಕರಣಗಳು ಪತ್ತೆಯಾಗಿವೆ.
ಹೊಸಪೇಟೆಯಲ್ಲಿ ಒಂದು ಪ್ರಕರಣ ಪತ್ತೆಯಾಗಿದ್ದು, ದುಬೈನಿಂದ ಬಂದ ವ್ಯಕ್ತಿಯಲ್ಲಿ ವೈರಸ್ ಲಕ್ಷಣಗಳು ಪತ್ತೆಯಾಗಿವೆ. ಕೊರೊನಾ ರೋಗದ ಕೆಲವು ಗುಣ ಲಕ್ಷಣಗಳು ಕಂಡು ಬಂದಿರುವುದರಿಂದ ವ್ಯಕ್ತಿಗೆ ಕೊರೊನಾ ರೋಗ ಇದೆಯಾ ಇಲ್ಲವಾ ಎಂಬ ಬಗ್ಗೆ ಹೆಚ್ಚಿನ ಪರೀಕ್ಷೆ ನಡೆಯುತ್ತಿವೆ.
ಜಿಲ್ಲಾಧಿಕಾರಿ ನಕುಲ್ ಅವರು ಪ್ರತಿಕ್ರಿಯೆ ನೀಡಿದ್ದು, ಆತಂಕ ಪಡುವ ಅಗತ್ಯ ಇಲ್ಲ. ಇದು ಸಾಮಾನ್ಯ. ಹೊರಗಿನಿಂದ ಬಂದ ವ್ಯಕ್ತಿಗಳಿಗೆ ಕೊರಾನಾ ವೈರಸ್ ಇರಬಹುದು ಎಂದು ಪರೀಕ್ಷೆ ನಡೆಯುತ್ತಿದೆ. ನಮ್ಮಲ್ಲಿನ ಜನರಲ್ಲಿ ಕೊರೋನಾ ಲಕ್ಷಣಗಳು ಕಂಡುಬಂದಿಲ್ಲ. ಜನರು ಯಾವುದೇ ಕಾರಣಕ್ಕೆ ಈ ಕುರಿತು ವದಂತಿ ಸುದ್ದಿಗಳಿಗೆ ಕಿವಿಗೊಡಬೇಡಿ. ಇಲ್ಲಿ ಸಕಾಲಕ್ಕೆ ಚಿಕಿತ್ಸೆ ಮಾಡಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ ಎಂದರು.
ಮತ್ತೊಂದು ಪ್ರಕರಣ ತೋರಣಗಲ್ಲಿನ ಜಿಂದಾಲ್ ಪ್ರದೇಶದಲ್ಲಿ ವರದಿಯಾಗಿದ್ದು, ಅದಿನ್ನು ಕೊರೊನಾ ವೈರಸ್ ಎಂದು ದೃಢಪಟ್ಟಿಲ್ಲ.