ಬೆಂಗಳೂರು :ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣ ಹೆಚ್ಚಾಗುತ್ತಿದ್ದು, ಇದೀಗ ಚಿತ್ರದುರ್ಗದ ಬಿಜೆಪಿ ಶಾಸಕ ಜೆ.ಹೆಚ್. ತಿಪ್ಪಾರೆಡ್ಡಿಗೆ ಕೊರೊನಾ ಸೋಂಕು ತಗುಲಿರುವುದಾಗಿ ದೃಢಪಟ್ಟಿದೆ.
ಸೋಮವಾರ ರೋಗ ಲಕ್ಷಣಗಳು ಕಾಣಿಸಿಕೊಂಡ ಹಿನ್ನಲೆಯಲ್ಲಿ ಕೊರೊನಾ ಟೆಸ್ಟ್ ಮಾಡಿಸಲಾಗಿತ್ತು. ವರದಿಯಲ್ಲಿ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ.
ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.